ಜಮ್ಮು: ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಗಿಸಿರುವ ಪಾಕಿಸ್ತಾನ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಯಶ್ ಪೌಲ್ (24) ಹುತಾತ್ಮ ಯೋಧ. ಇವರು ಜಮ್ಮುವಿನ ಉಧಮ್ಪುರ ಪೋಸ್ಟ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಜನವರಿಯಿಂದ ಈವರೆಗೆ ಪಾಕ್ ಪಡೆಗಳು 110 ಸಾರಿ ಕದನ ವಿರಾಮ ಉಲ್ಲಂಘಿಸಿದೆ. ಕಳೆದ ಸೋಮವಾರ ತಡರಾತ್ರಿ ಪಾಕ್ ಪಡೆಗಳು ಅಪ್ರಚೋದಿತ ಶೆಲ್ ದಾಳಿ ನಡೆಸಿತ್ತು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.