ETV Bharat / bharat

ದುಷ್ಕರ್ಮಿಗಳಿಂದ ಗುಂಡಿನ ದಾಳಿ : ನಿವೃತ್ತ ಎಎಸ್ಐ ಮಗ ಸಾವು - son of retired ASI shot dead

ನವದೆಹಲಿಯ ಅಮನ್ ವಿಹಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗ್ಯಾಂಗ್​ ವಾರ್​ನಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.

son of retired ASI shot dead
ನಿವೃತ್ತ ಎಎಸ್ಐ ಮಗ ಸಾವು
author img

By

Published : Jul 3, 2020, 11:50 AM IST

ನವದೆಹಲಿ : ನಗರದ ಅಮನ್ ವಿಹಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗ್ಯಾಂಗ್ ವಾರ್​ನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ನಿವೃತ್ತ ಎಎಸ್​ಐ ಮಗ ಮೃತಪಟ್ಟಿದ್ದಾನೆ.

ಮೃತ ಯುವಕನನ್ನು ನಿತಿನ್ ದಲಾಲ್ ಎಂದು ಗುರುತಿಸಲಾಗಿದೆ. ಈತ ಕಾರಿನಲ್ಲಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈ ವೇಳೆ ಆತ ಮೃಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಗ್ಯಾಂಗ್ ವಾರ್​ ಘಟನೆಗೆ ಕಾರಣ ಎಂದು ಹೇಳಲಾಗ್ತಿದೆ. ಮೃತ ಯುವಕ ದೆಹಲಿ ಪೊಲೀಸ್ ಇಲಾಖೆಯ ನಿವೃತ್ತ ಎಎಸ್​ಐ ಮಗ ಎಂದು ತಿಳಿದು ಬಂದಿದೆ.

ಮೃತ ಯುವಕ ಮತ್ತು ಆತನ ಸಹೋದರ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮೃತನ ಸಹೋದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಲು ಮುಂದಾಗಿದ್ದರು. ಈ ವೇಳೆ ತಡೆಯಲು ಬಂದ ನಿತಿನ್ ಗುಂಡಿಗೆ ಬಲಿಯಾಗಿದ್ದಾನೆ.

ಘಟನೆ ನಡೆದ ತಕ್ಷಣ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.