ನವದೆಹಲಿ: ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೊಟ್ಟೆಯ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
-
Dr. DS Rana, Chairman (Board of Management), Sir Ganga Ram Hospital, Delhi: Sonia Gandhi (Congress interim president) who was admitted yesterday, February 2 has undergone medical tests. She has been found to be suffering from stomach infection&is being treated for the same. pic.twitter.com/QxjyE7Ky3J
— ANI (@ANI) February 3, 2020 " class="align-text-top noRightClick twitterSection" data="
">Dr. DS Rana, Chairman (Board of Management), Sir Ganga Ram Hospital, Delhi: Sonia Gandhi (Congress interim president) who was admitted yesterday, February 2 has undergone medical tests. She has been found to be suffering from stomach infection&is being treated for the same. pic.twitter.com/QxjyE7Ky3J
— ANI (@ANI) February 3, 2020Dr. DS Rana, Chairman (Board of Management), Sir Ganga Ram Hospital, Delhi: Sonia Gandhi (Congress interim president) who was admitted yesterday, February 2 has undergone medical tests. She has been found to be suffering from stomach infection&is being treated for the same. pic.twitter.com/QxjyE7Ky3J
— ANI (@ANI) February 3, 2020
ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ಸೋನಿಯಾ ಗಾಂಧಿ ನಿನ್ನೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಈ ಬಗ್ಗೆ ಮಾಹಿತಿ ನೀಡಿರುವ ಆಸ್ಪತ್ರೆ ಆಡಳಿತ ಮಂಡಳಿ ಮುಖ್ಯಸ್ಥ ಡಿ.ಎಸ್.ರಾಣಾ, ನಿನ್ನೆ ಸಂಜೆ 7 ಗಂಟೆಗೆ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಮತಿ ಸೋನಿಯಾ ಗಾಂಧಿ ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಿದ್ದಾರೆ. ಅವರು ಹೊಟ್ಟೆಯ ಸೋಂಕಿನಿಂದ ಬಳಲುತ್ತಿರುವುದು ಕಂಡುಬಂದಿದ್ದು, ಇದಕ್ಕಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಸೋನಿಯಾ ಗಾಂಧಿ ಭಾನುವಾರ ಆಸ್ಪತ್ರೆಗೆ ದಾಖಲಾಗುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಸೋನಿಯಾ ಅವರ ಜೊತೆಯಲ್ಲೆ ಇದ್ದರು. ಕೇಂದ್ರ ಬಜೆಟ್ ಮಂಡನೆ ವೇಳೆ ಕೂಡ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಗೈರಾಗಿದ್ದರು. ಮಂಗಳವಾರ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.