ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಇಲ್ಲಿನ ಸರ್ ಗಂಗಾ ರಾಮ್ ಆಸ್ಪತ್ರೆಗೆ ತಪಾಸಣೆಗಾಗಿ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೋನಿಯಾ ಗಾಂಧಿ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೋನಿಯಾ ಜೊತೆಯಲ್ಲಿದ್ದಾರೆ. ಇಂದು ರಾತ್ರಿ ಸೋನಿಯಾ ಆಸ್ಪತ್ರೆಯಲ್ಲಿಯೇ ಉಳಿಯಲಿದ್ದಾರೆಂದು ತಿಳಿದುಬಂದಿದೆ
ನಿನ್ನೆ ಕೇಂದ್ರ ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಗೈರಾಗಿದ್ದರು.