ETV Bharat / bharat

ಮಧ್ಯಪ್ರದೇಶ ಕಾಂಗ್ರೆಸ್​ ಕಾರ್ಯದರ್ಶಿಗಳಾಗಿ ಮಿತ್ತಲ್, ಇಂದೋರಾ ನೇಮಕ

ಸಿ.ಪಿ.ಮಿತ್ತಲ್ ಮತ್ತು ಕುಲ್​ದೀಪ್ ಇಂದೋರಾ ಅವರನ್ನು ಮಧ್ಯಪ್ರದೇಶ ಕಾಂಗ್ರೆಸ್​ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿಗಳಾಗಿ ನೇಮಕ ಮಾಡಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶಿಸಿದ್ದಾರೆ.

Sonia Gandhi names Mittal, Indora as party Secretaries for Madhya Pradesh
ಮಧ್ಯಪ್ರದೇಶ ಕಾಂಗ್ರೆಸ್​ ಕಾರ್ಯದರ್ಶಿಗಳ ನೇಮಕ
author img

By

Published : May 16, 2020, 9:19 AM IST

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ಮುಕುಲ್ ವಾಸ್ನಿಕ್ ಅವರನ್ನು ಮಧ್ಯಪ್ರದೇಶ ಕಾಂಗ್ರೆಸ್​ನ​ ಹೊಸ ಉಸ್ತುವಾರಿಯಾಗಿ ನೇಮಕ ಮಾಡಿದ ಎರಡು ವಾರಗಳ ಬಳಿಕ ಸಿ.ಪಿ.ಮಿತ್ತಲ್ ಮತ್ತು ಕುಲ್​ದೀಪ್ ಇಂದೋರಾ ಅವರನ್ನು ಪಕ್ಷದ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿಗಳಾಗಿ ನೇಮಕ ಮಾಡಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮಿತ್ತಲ್ ಮತ್ತು ಇಂದೋರಾ ಅವರನ್ನು ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್​ ಉಸ್ತುವಾರಿಗಳಾಗಿ ಸೋನಿಯಾ ಗಾಂಧಿ ನೇಮಕ ಮಾಡಿದ್ದಾರೆ. ರಾಜ್ಯದಿಂದ ಎಐಸಿಸಿ ಕಾರ್ಯದರ್ಶಿಗಳಾಗಿದ್ದ ವರ್ಷಾ ಗಾಯಾಕ್​ ವಾಡ್​ ಮತ್ತು ಹರ್ಷವರ್ಧನ್ ಸಪ್ಕಲ್ ಅವರನ್ನು ಹುದ್ದೆಯಿಂದ ಮುಕ್ತಿಗೊಳಿಸಿ ನೂತನ ಕಾರ್ಯದರ್ಶಿಗಳಾಗಿ ಸುಧಾನ್ಸು ತ್ರಿಪಾಠಿ ಮತ್ತು ಸಂಜಯ್ ಕಪೂರ್ ಅವರನ್ನು ನೇಮಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ ಗಾಯಕ್​ ವಾಡ್​ ಮತ್ತು ಸಪ್ಕಲ್ ಅವರ ಕೊಡುಗೆಯನ್ನು ಪಕ್ಷವು ಪ್ರಶಂಸಿಸುತ್ತದೆ ಎಂದಿದ್ದಾರೆ.

ಏಪ್ರಿಲ್ 30ರಂದು ದೀಪಕ್ ಬಬೇರಿಯಾ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಅವರ ರಾಜೀನಾಮೆಯನ್ನು ಅಂಗೀಕರಿಸಿರುವ ಸೋನಿಯಾ ಗಾಂಧಿ, ಮುಕುಲ್ ವಾಸ್ನಿಕ್ ಅವರನ್ನು ನೂತನ ಉಸ್ತುವಾರಿಯನ್ನಾಗಿ ನೇಮಿಸಿದ್ದಾರೆ. ಕಳೆದ ಮಾರ್ಚ್​ವರೆಗೆ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರದಲ್ಲಿತ್ತು. ಯುವ ನಾಯಕ ಜೋತಿರಾಧಿತ್ಯ ಸಿಂಧ್ಯಾ ಪಕ್ಷ ತೊರೆದು ಬಿಜೆಪಿ ಸೇರಿದ್ದರಿಂದ ಅವರ ಜೊತೆ ಅನೇಕ ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಇದು ಕಮಲನಾಥ್​ ನೇತೃತ್ವದ ಮಧ್ಯಪ್ರದೇಶ ಕಾಂಗ್ರೆಸ್​ ಸರ್ಕಾರದ ಪತನಕ್ಕೆ ಕಾರಣವಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.