ನವದೆಹಲಿ : ಗಂಗಾ ರಾಮ್ ಆಸ್ಪತ್ರೆಯಲ್ಲಿ ಹೊಟ್ಟೆ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಸಂಜೆ ಹೊಟ್ಟೆ ಸೋಂಕಿನ ಹಿನ್ನೆಲೆ ಸೋನಿಯಾ ಗಾಂಧಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು ಚೇತರಿಕೆ ಕಂಡು ಕೊಂಡಿದ್ದಾರೆ ಎಂದು ಆಸ್ಪತ್ರೆಯ ಅಧ್ಯಕ್ಷರಾದ (ಆಡಳಿತ ಮಂಡಳಿ) ಡಾ. ಡಿ.ಎಸ್. ರಾಣಾ ತಿಳಿಸಿದ್ದಾರೆ.
ಅನಾರೋಗ್ಯದ ಹಿನ್ನೆಲೆ ಶನಿವಾರ ನಡೆದ 2020ರ ಬಜೆಟ್ ಗೆ ಸೋನಿಯಾ ಗಾಂಧಿ ಗೈರಾಗಿದ್ದರು.