ETV Bharat / bharat

ಕಾಂಗ್ರೆಸ್​ ಆಡಳಿತವಿರುವ ರಾಜ್ಯಗಳ ಸಿಎಂಗಳೊಂದಿಗೆ ನಾಳೆ ಸೋನಿಯಾ ಚರ್ಚೆ

ವಿಡಿಯೋ ಕಾನ್ಫರೆನ್ಸ್​ ಮೂಲಕ ನಾಳೆ ನಡೆಯುವ ಸಭೆಯಲ್ಲಿ ಪಂಜಾಬ್, ರಾಜಸ್ಥಾನ, ಛತ್ತೀಸಗಢ ಹಾಗೂ ಪುದುಚೇರಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚ ಭರಿಸುವಿಕೆ ಹಾಗೂ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಅವರೊಂದಿಗೆ ರಾಹುಲ್​ ಗಾಂಧಿ ನಡೆಸಿದ ಸಂವಾದದ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

Sonia to hold meet
Sonia to hold meet
author img

By

Published : May 5, 2020, 6:49 PM IST

ನವದೆಹಲಿ: ದೇಶದ ಕಾಂಗ್ರೆಸ್​ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಮಾತುಕತೆ ನಡೆಸಲಿದ್ದಾರೆ. ಮೂರನೇ ಹಂತದ ಲಾಕ್​ಡೌನ್​ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎನ್ನಲಾಗಿದೆ.

ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆಯುವ ಸಭೆಯಲ್ಲಿ ಪಂಜಾಬ್, ರಾಜಸ್ಥಾನ, ಛತ್ತೀಸಗಢ ಹಾಗೂ ಪುದುಚೇರಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚ ಭರಿಸುವಿಕೆ ಹಾಗೂ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಅವರೊಂದಿಗೆ ರಾಹುಲ್​ ಗಾಂಧಿ ನಡೆಸಿದ ಸಂವಾದದ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಪೂರ್ವ ಸಿದ್ಧತೆ ಇಲ್ಲದ ಲಾಕ್​ಡೌನ್​ನಿಂದಾಗಿ ವಲಸೆ ಕಾರ್ಮಿಕರು ಸಾಕಷ್ಟು ತೊಂದರೆಗೀಡಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ವಲಸೆ ಕಾರ್ಮಿಕರ ವಿಷಯವನ್ನು ಸರಕಾರದ ವಿರುದ್ಧ ಹೇಗೆ ಬಳಸಬಹುದು ಎಂಬುದರ ಕುರಿತಾಗಿ ಕಾರ್ಯತಂತ್ರಗಳನ್ನು ಈ ಸಭೆಯಲ್ಲಿ ರೂಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಲಾಕ್​ಡೌನ್​ನಿಂದ ಕುಸಿದ ಆರ್ಥಿಕತೆ ಮೇಲೆತ್ತಲು ಕೇಂದ್ರ ಸರ್ಕಾರ ಎಲ್ಲ ಬಡವರ ಖಾತೆಗಳಿಗೆ ತಲಾ 10 ಸಾವಿರ ರೂಪಾಯಿ ಜಮೆ ಮಾಡಬೇಕೆಂದು ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ರಾಹುಲ್​ ಜೊತೆಗಿನ ಸಂವಾದದಲ್ಲಿ ಹೇಳಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.