ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇದೀಗ ಮತ್ತಷ್ಟು ವೇಗ ಪಡೆದುಕೊಂಡಿರುವ ಕಾರಣ ಭಾರತದ ಎಲ್ಲ ವಿಮಾನಗಳಿಗೆ ಸೌದಿ ಅರೇಬಿಯಾ ನಿರ್ಬಂಧ ವಿಧಿಸಿ ಆದೇಶ ಹೊರಹಾಕಿದೆ.
ಇದಕ್ಕೆ ಸಂಬಂಧಿಸಿದಂತೆ ಸೌದಿ ಅರೇಬಿಯಾ ವಿಮಾನಯಾನ ಇಲಾಖೆ ಭಾರತೀಯ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಮಾಹಿತಿ ನೀಡಿದೆ. ಭಾರತದ ಜತೆ ಬ್ರೆಜಿಲ್ ಹಾಗೂ ಅರ್ಜೆಂಟೀನಾ ದೇಶಗಳಿಗೂ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಯಾವುದೇ ವ್ಯಕ್ತಿ ಬರುವಂತಿಲ್ಲ. ಹಾಗೂ ಅಲ್ಲಿಂದ ಹೋಗುವಂತಿಲ್ಲ.
ಸೌದಿ ಅರೇಬಿಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ವಿಮಾನಯಾನ ಸಂಸ್ಥೆಗಳಿಗೆ ಮತ್ತು ಚಾರ್ಟರ್ಡ್ ಫ್ಲೈಟ್ ಕಂಪನಿಗಳಿಗೆ ಮಾಹಿತಿ ನೀಡಲಾಗಿದೆ. ಮಾರ್ಚ್ 23 ರಿಂದ ದೇಶದಲ್ಲಿ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಂಡಿದ್ದು, ವಂದೇ ಭಾರತ್ ಮಿಷನ್ ಮಾತ್ರ ಕಾರ್ಯನಿರ್ವಹಿಸುತ್ತಿದೆ.
ಭಾರತದಲ್ಲಿ ಈಗಾಗಲೇ ಕೋವಿಡ್ ಕೇಸ್ಗಳ ಸಂಖ್ಯೆ 56,46,010 ಆಗಿದ್ದು, ನಿತ್ಯ 90 ಸಾವಿರಕ್ಕೂ ಅಧಿಕ ಕೇಸ್ ಕಾಣಿಸಿಕೊಳ್ಳುತ್ತಿವೆ.