ETV Bharat / bharat

ಸೌರವ್ ಗಂಗೂಲಿಗೆ ಲಘು ಹೃದಯಾಘಾತ: ಐಸಿಯುನಲ್ಲಿ ಪ್ರಾಥಮಿಕ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ - ಗಂಗೂಲಿಗೆ ಐಸಿಯುನಲ್ಲಿ ಚಿಕಿತ್ಸೆ

ಭಾರತೀಯ ಕ್ರಿಕೆಟ್​ ಮಂಡಳಿ ಅಧ್ಯಕ್ಷ ಸೌರವ್​ ಗಂಗೂಲಿ ಅವರಿಗೆ ಲಘು ಹೃದಯಾಘಾತವಾಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನಡೆಯುತ್ತಿದೆ.

Sourav Ganguly
Sourav Ganguly
author img

By

Published : Jan 2, 2021, 3:47 PM IST

Updated : Jan 2, 2021, 4:06 PM IST

ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಅವರಿಗೆ ಲಘು ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಕೋಲ್ಕತ್ತಾದ ವುಡ್​ಲ್ಯಾಂಡ್​ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಗೂ ಒಳಪಡಿಸಬಹುದು ಎಂದು ಹೇಳಲಾಗುತ್ತಿದೆ. ವೈದ್ಯಕೀಯ ಮೂಲಗಳ ಪ್ರಕಾರ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ ಮನೆಯಲ್ಲಿರುವ ಜಿಮ್​ನಲ್ಲಿದ್ದಾಗ ಗಂಗೂಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಗಂಗೂಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿ, ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

  • Sad to hear that @SGanguly99 suffered a mild cardiac arrest and has been admitted to hospital.

    Wishing him a speedy and full recovery. My thoughts and prayers are with him and his family!

    — Mamata Banerjee (@MamataOfficial) January 2, 2021 " class="align-text-top noRightClick twitterSection" data=" ">

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ಟ್ವೀಟ್ ಮಾಡಿದ್ದು, ಸೌರವ್ ಗಂಗೂಲಿ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ತಾವು ಅವರ ಕುಟುಂಬದೊಂದಿಗೆ ಮಾತನಾಡಿದ್ದು, ದಾದಾ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

  • I wish and pray for the speedy recovery of @SGanguly99. I’ve spoken to his family. Dada is stable and is responding well to the treatment.

    — Jay Shah (@JayShah) January 2, 2021 " class="align-text-top noRightClick twitterSection" data=" ">

Last Updated : Jan 2, 2021, 4:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.