ಚೆನ್ನೈ: ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ದೇಶದ ಜನಪ್ರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಪ್ರಕಟಣೆ ಬಿಡುಗಡೆ ಮಾಡಿದೆ.

ಜೀವರಕ್ಷಕ ಸಾಧನದ ಜತೆಗೆ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆ ತಿಳಿಸಿದೆ.
ಕೊರೊನಾ ವೈರಸ್ನಿಂದಾಗಿ ಆಗಸ್ಟ್ 5ರಂದು 74ವರ್ಷದ ಗಾಯಕ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದ ಬಗ್ಗೆ ಕಳೆದ ಎರಡು ದಿನಗಳ ಹಿಂದೆ ಪುತ್ರ ಚರಣ್ ಮಾಹಿತಿ ನೀಡಿದ್ದರು.