ETV Bharat / bharat

ನಕಲಿ ಮದ್ಯ ಸೇವನೆ - 45ಮಂದಿ ಸಾವು; ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ

ನಕಲಿ ಮದ್ಯ ಸೇವನೆ ಮಾಡಿ 45 ಜನ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್​ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.

liquor
liquor
author img

By

Published : Aug 1, 2020, 9:46 AM IST

ಅಮೃತಸರ್​( ಪಂಜಾಬ್​): ಪಂಜಾಬ್​​ನ ಗುರುದಾಸ್​ ಪುರ ಜಿಲ್ಲೆಯ ತರನ್​ ತಾರನ್​ ಮತ್ತು ಬಟಾಲಾದಲ್ಲಿ ನಕಲಿ ಮದ್ಯ ಸೇವನೆ ಮಾಡಿ ಸಾವನ್ನಪ್ಪಿದವರ ಸಂಖ್ಯೆ 45ಕ್ಕೆ ಏರಿಕೆ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್​ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ತಾರ್ಸಿಕಾ ಪೊಲೀಸ್ ಠಾಣೆ ವ್ಯಾಪ್ತಿಯ ಮುಚಾಲ್ ಗ್ರಾಮದಲ್ಲಿ ವಿಷಕಾರಿ ಮದ್ಯ ಸೇವಿಸಿ ಕನಿಷ್ಠ ಆರು ಮಂದಿ ಸಾವನ್ನಪ್ಪಿರುವ ಘಟನೆ ಮೊದಲು ಬೆಳಕಿಗೆ ಬಂದಿತ್ತು. ಸಾವಿನ ಸಂಖ್ಯೆ 45ಕ್ಕೆ ಏರಿಕೆ ಆಗಿದೆ. ಈ ಮದ್ಯ ಕುಡಿದವರೆಲ್ಲ ಬಡವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

ಗ್ರಾಮದ ಅನೇಕ ಮನೆಗಳಲ್ಲಿ ಈ ಮದ್ಯ ಮಾರಾಟವಾಗಿದೆ ಎಂದು ಗ್ರಾಮಸ್ಥರು ಹೇಳಿದ್ದರು. ಪೊಲೀಸ್​ ಇಲಾಖೆ ನಿರ್ಲಕ್ಷ್ಯವೇ ಇಷ್ಟಕ್ಕೆಲ್ಲ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರಕರಣ ಭಾರಿ ಸದ್ದು ಮಾಡುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.