ಕೊಲ್ಲಂ : ಕೊರೊನಾ ಭೀತಿ ನಡುವೆಯೂ ಜಿಲ್ಲೆಯಲ್ಲಿ ಇಂದಿನಿಂದ ಎಸ್ಸೆಸೆಲ್ಸಿ (ವೃತ್ತಿಪರ) ಪರೀಕ್ಷೆ ಆರಂಭವಾಗಿದ್ದು, 232 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 96, 640 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಗಾಗಿ ಎಲ್ಲಾ ಸಿದ್ದತೆಗಳನ್ನು ಮಾಡಲಾಗಿದ್ದು, ಕೊರೊನಾ ಹರಡದಂತೆ ಸಂಪೂರ್ಣ ಸುರಕ್ಷತಾ ಕ್ರಮಗಳನ್ನು ಪಾಲಿಸಲಾಗುತ್ತಿದೆ. ಈಗಾಗಲೇ ಎಲ್ಲಾ ಪರೀಕ್ಷಾ ಕೊಠಡಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಬಳಸಿ ಸ್ಯಾನಿಟೈಸ್ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೂ ಜಾಗೃತಿ ಕರಪತ್ರ ಮಾಸ್ಕ್ ವಿತರಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಹ್ಯಾಂಡ್ ವಾಶ್, ಸ್ಯಾನಿಟೈಸರ್ ಅಳವಡಿಸಲಾಗಿದ್ದು, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ವಿಶೇಷ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಬಸ್ ಹೋಗದ ಊರುಗಳ ವಿದ್ಯಾರ್ಥಿಗಳಿಗಾಗಿ ಖಾಸಗಿ ವಾಹನದ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಇದ್ದರೂ ಮನೆಯಿಂದಲೇ ನೀರು ತರುವಂತೆ ಸೂಚಿಸಲಾಗಿದೆ ಮತ್ತು ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಗಳಿಗಾಗಿ ಜಿಲ್ಲಾ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವಾರ್ ರೂಂ ತೆರೆಯಲಾಗಿದೆ.