ನವದೆಹಲಿ: ದೂರದ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ವೈದ್ಯರು ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಲು ವಿಶೇಷ ಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ, ಇಂದಿರಾ ಬ್ಯಾನರ್ಜಿ, ವಿನೀತ್ ಸರನ್, ಎಂ.ಆರ್.ಶಾ, ಮತ್ತು ಅನಿರುದ್ಧ ಬೋಸ್ ಅವರನ್ನು ಒಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ.
ಮೀಸಲಾತಿ ಸೌಲಭ್ಯಗಳನ್ನು ನೀಡುವುದರಿಂದ ಸರ್ಕಾರಿ ಆಸ್ಪತ್ರೆಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ಉತ್ತೇಜಿಸಿದಂತಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.