ನವದೆಹಲಿ: ಸೆಪ್ಟೆಂಬರ್ 30ರೊಳಗೆ ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ನಡೆಸಬೇಕೆಂಬ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ)ದ ಅಧಿಸೂಚನೆಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡುವಂತಿಲ್ಲ. ಸೆ. 30ರೊಳಗೆ ವಿಶ್ವವಿದ್ಯಾಲಯಗಳು ಪರೀಕ್ಷೆ ನಡೆಸಬೇಕು. ಕೊರೊನಾ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ರಾಜ್ಯ ಸರ್ಕಾರಗಳು ಪರೀಕ್ಷೆ ಮುಂದೂಡಲು ಅಥವಾ ಪರೀಕ್ಷೆಗಳ ದಿನಾಂಕ ನಿಗದಿಗೆ ಯುಜಿಸಿಯನ್ನ ಸಂಪರ್ಕಿಸಬಹುದು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಕಳೆದ ಜುಲೈ 6ರಂದು ಯುಜಿಸಿ, ಪರೀಕ್ಷೆಗಳನ್ನು ನಡೆಸದೆ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವಂತಿಲ್ಲ. ಎಲ್ಲಾ ವಿಶ್ವವಿದ್ಯಾಲಯಗಳು ಸೆ. 30ರೊಳಗೆ ಪರೀಕ್ಷೆ ನಡೆಸಬೇಕೆಂದು ಅಧಿಸೂಚನೆ ಹೊರಡಿಸಿತ್ತು.