ನವದೆಹಲಿ: ಸಿಎಎ, ಎನ್‌ಆರ್‌ಸಿ ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ಮತ್ತೆ ಹಿಂಸಾಚಾರದ ಸ್ವರೂಪ ಪಡೆದುಕೊಂಡಿದೆ.
ನಿನ್ನೆ ನಡೆದಿದ್ದ ಗಲಭೆಯಲ್ಲಿ ಸತ್ತವರ ಸಂಖ್ಯೆ 7ಕ್ಕೆ ಏರಿದ್ದು, ಈಶಾನ್ಯ ದೆಹಲಿಯ ಭಜನ್‌ಪುರ್ ಚೌಕ್ ಬಳಿ ಇಂದು ಸಹ ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಅಲ್ಲದೆ, ಸಂಚಾರ ದಟ್ಟಣೆ ತಪ್ಪಿಸಲು ಸಲುವಾಗಿ ಕಾರವಾಲ್ ನಗರದ ರಸ್ತೆಯನ್ನು ಬಂದ್ ಮಾಡಿದ್ದಾರೆ.
ಸದ್ಯ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಹಬದಿಗೆ ಬಂದಿದ್ದು, ಬೂದಿ ಮುಚ್ಚಿದ ಕೆಂಡದಂತಿದೆ.