ಚಂಡೀಗಢ/ ಹರಿಯಾಣ: ಕೊರೊನಾವೈರಸ್ ಹಿನ್ನೆಲೆ ಲಾಕ್‌ಡೌನ್ ಮಾಡಿದ್ದಾದರಿಂದಾಗಿ ಶಾಲೆಗಳು ಮುಚ್ಚಲ್ಪಟ್ಟಿರುವುದರಿಂದ ರಾಜ್ಯದ 1 ರಿಂದ 8 ನೇ ತರಗತಿಯವರೆಗಿನ ಎಲ್ಲ ಶಾಲಾ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಯಿಲ್ಲದೇ ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಭಾನುವಾರ ಹೇಳಿದ್ದಾರೆ.
ಶಾಲೆ ತೆರೆದ ಕೂಡಲೇ ಮೇಲಿನ ತರಗತಿಗಳ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಸೇರಲು ಅರ್ಹರಿರುತ್ತಾರೆ ಎಂದು ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಇನ್ನು ಲಾಕ್‌ಡೌನ್ ಕಾರಣದಿಂದಾಗಿ 10 ನೇ ತರಗತಿಗೆ ವಿಜ್ಞಾನ ಪರೀಕ್ಷೆಯನ್ನು ನಡೆಸಲಾಗಿಲ್ಲ, ಆದ್ದರಿಂದ ಇತರ ವಿಷಯಗಳಲ್ಲಿ ಪಡೆದ ಸರಾಸರಿ ಅಂಕಗಳ ಆಧಾರದ ಮೇಲೆ 10 ನೇ ತರಗತಿಯ ವಿದ್ಯಾರ್ಥಿಗಳನ್ನು 11 ನೇ ತರಗತಿಗೆ ಬಡ್ತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಖಟ್ಟರ್ ಹೇಳಿದರು.
ಅದೇ ರೀತಿ, 11 ನೇ ತರಗತಿ ವಿದ್ಯಾರ್ಥಿಗಳಿಗೆ ಇತರ ವಿಷಯಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಗಣಿತ ವಿಷಯದ ಪರೀಕ್ಷೆಗೆ ಹಾಜರಾಗದೆ ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದರು. ಇನ್ನು ಈಗಿನ ಪರಿಸ್ಥಿತಿ ತಿಳಿಗೊಂಡ ನಂತರ ಗಣಿತ ವಿಷಯದ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಅವರು ಇದೇ ವೇಳೆ ಮಾಹಿತಿ ನೀಡಿದರು.