ನವದೆಹಲಿ: ದೇಶದ್ರೋಹ ಆರೋಪದಡಿ ಕರ್ನಾಟಕದ ಬೀದರ್ನ ಶಾಹೀನ್ ಶಾಲೆಯ ಆಡಳಿತ ಮಂಡಳಿಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸಿಎಎ, ಎನ್ಆರ್ಸಿ ಹಾಗೂ ಎನ್ಪಿಆರ್ ವಿರೋಧಿಸಿ ಬೀದರ್ನ ಶಾಹೀನ್ ಶಾಲೆಯಲ್ಲಿ ಮಕ್ಕಳು ಮಾಡಿದ್ದ ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಸಂಭಾಷಣೆ ನಡೆಸಲಾಗಿದೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರೊಬ್ಬರು ದೂರು ನೀಡಿದ್ದರು. ಈ ಸಂಬಂಧ ದೇಶದ್ರೋಹ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಶಾಹೀನ್ ಸಂಸ್ಥೆಯ ಮುಖ್ಯ ಶಿಕ್ಷಕಿ ಫರೀದಾ ಬೇಗಂ ಹಾಗೂ ನಾಟಕದಲ್ಲಿ ಪಾತ್ರ ಮಾಡಿದ್ದ ವಿದ್ಯಾರ್ಥಿನಿಯ ತಾಯಿ ನಬಿದಾ ಬೇಗಂ ಅವರನ್ನು ಬಂಧಿಸಿದ್ದರು.
ಶಾಲೆಯ ಆಡಳಿತ ಮಂಡಳಿಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತೆ ಯೋಗಿತಾ ಭಯಾನ, ಸುಪ್ರೀಂಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ನ್ಯಾಯಾಲಯವು, ಅರ್ಜಿಯನ್ನು ತಿರಸ್ಕರಿಸಿದೆ.