ETV Bharat / bharat

ಜೆಇಇ-ನೀಟ್ ಪರೀಕ್ಷೆ​​ ಮುಂದೂಡಿಕೆ ಅರ್ಜಿ ವಜಾ... ಸುಪ್ರೀಂಕೋರ್ಟ್​​ನಿಂದ ಮಹತ್ವದ ಆದೇಶ

ದೇಶದಲ್ಲಿ ಕೊರೊನಾ ವೈರಸ್​ ಹಾವಳಿ ಜೋರಾಗಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಪರೀಕ್ಷೆ ಮುಂದೂಡಿಕೆ ಮಾಡುವಂತೆ ಬಿಜೆಪಿಯೇತರ ಆರು ರಾಜ್ಯದ ಸಿಎಂಗಳು ಅರ್ಜಿ ಸಲ್ಲಿಕೆ ಮಾಡಿದ್ದರು.

Supreme Court
Supreme Court
author img

By

Published : Sep 4, 2020, 3:39 PM IST

ನವದೆಹಲಿ: ಮಹಾಮಾರಿ ಕೊರೊನಾ ವೈರಸ್​ ಹಾವಳಿ ಕಾರಣ ದೇಶದಲ್ಲಿ ನಡೆಸಲು ನಿರ್ಧರಿಸಲಾಗಿರುವ ಜೆಇಇ-ನೀಟ್​ ಪರೀಕ್ಷೆ ಮುಂದೂಡುವಂತೆ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಂಡಿದೆ. ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್​ನಿಂದ ಮಹತ್ವದ ಆದೇಶ ಹೊರಬಿದ್ದಿದೆ.

ಕೊರೊನಾ ವೈರಸ್ ಕಾರಣ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಈ ಪರೀಕ್ಷೆ ಮೂಂದೂಡಿಕೆ ಮಾಡುವಂತೆ ಬಿಜೆಪಿಯೇತರ ರಾಜ್ಯಗಳಿಂದ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿತ್ತು. ಪಶ್ಚಿಮ ಬಂಗಾಳ, ರಾಜಸ್ಥಾನ, ಪಂಜಾಬ್, ಮಹಾರಾಷ್ಟ್ರ, ಛತ್ತೀಸ್​ಗಢ ಮತ್ತು ಜಾರ್ಖಂಡ್ ರಾಜ್ಯ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದವು. ಆದರೆ ಇದೀಗ ಅದು ವಜಾಗೊಂಡಿದೆ. ಹೀಗಾಗಿ ಬಿಜೆಪಿಯೇತರ ಸರ್ಕಾರಗಳಿಗೆ ಮತ್ತೊಮ್ಮೆ ಮುಖಭಂಗವಾಗಿದೆ. ಜತೆಗೆ ಈಗಾಗಲೇ ನಿರ್ಧಾರಗೊಂಡಿರುವ ವೇಳಾಪಟ್ಟಿ ಪ್ರಕಾರ ಪರೀಕ್ಷೆ ನಡೆಯಲಿವೆ ಎಂದು ತಿಳಿಸಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್, ನ್ಯಾ. ಬಿ.ಆರ್. ಗಾವೈ ಮತ್ತು ನ್ಯಾ.ಕೃಷ್ಣ ಮುರಾರಿ ನೇತೃತ್ವದ ತ್ರಿಸದಸ್ಯ ಪೀಠವು ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿದೆ.

ದೇಶದಲ್ಲಿ ರಾಷ್ಟ್ರೀಯ ಅರ್ಹತೆ ಪ್ರವೇಶ ಪರೀಕ್ಷೆ (ನೀಟ್) ಸೆಪ್ಟೆಂಬರ್ 13 ರಂದು ಹಾಗೂ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ ಸೆಪ್ಟೆಂಬರ್ 1 ರಿಂದ 6 ರವರೆಗೆ ನಡೆಯಲಿದೆ. ಈಗಾಗಲೇ ಜೆಇಇ ಪ್ರವೇಶ ಪರೀಕ್ಷೆ ಆರಂಭಗೊಂಡಿವೆ. ಈ ಪರೀಕ್ಷೆಗೆ ಅನೇಕ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಪರೀಕ್ಷೆ ಮುಂದೂಡಿಕೆ ಮಾಡುವಂತೆ ಅಗಸ್ಟ್​​ 17ರಂದು ವಿವಿಧ ರಾಜ್ಯದ 11 ವಿದ್ಯಾರ್ಥಿಗಳು ಸಲ್ಲಿಕೆ ಮಾಡಿದ್ದ ಮನವಿ ಕೂಡ ಸುಪ್ರೀಂಕೋರ್ಟ್​​ನಿಂದ ವಜಾಗೊಂಡಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.