ETV Bharat / bharat

ಅಯೋಧ್ಯೆ ತೀರ್ಪು: ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್

ಅಯೋಧ್ಯೆ ರಾಮಮಂದಿರ ಭೂ ವಿವಾದದ ಐತಿಹಾಸಿಕ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎಲ್ಲಾ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.

upreme Court dismisses all petitions
ಅಯೋಧ್ಯೆ ತೀರ್ಪು
author img

By

Published : Dec 12, 2019, 5:00 PM IST

ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂಕೋರ್ಟ್​ ನೀಡಿದ್ದ ಮಹತ್ವದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎಲ್ಲಾ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂಕೋರ್ಟ್​ ಇಂದು ವಜಾಗೊಳಿಸಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ವಿವಾದಿತ 2.77 ಎಕರೆ ಭೂಮಿಯನ್ನು ಶ್ರೀರಾಮ ಮಂದಿರ ನಿರ್ಮಾಣಕ್ಕೆ ನೀಡಿ, ಮಸೀದಿ ನಿರ್ಮಾಣಕ್ಕೆ ಬೇರೆಡೆ 5 ಎಕರೆ ಜಮೀನು ನೀಡಿ ಸುಪ್ರೀಂಕೋರ್ಟ್​ ಐತಿಹಾಸಿಕ ತೀರ್ಪು ನೀಡಿತ್ತು. ಆದರೆ ಈ ತೀರ್ಪು ಪ್ರಶ್ನಿಸಿ 18 ವಿವಿಧ ಸಂಘಟನೆಗಳು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.​ಎ. ಬೋಬ್ಡೆ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿತು.

ಅಖಿಲ ಭಾರತ ಮುಸ್ಲೀಮರ ವೈಯಕ್ತಿಕ ಕಾನೂನು ಮಂಡಳಿ ಮತ್ತು ನಿರ್ಮೋಹಿ ಅಖಾರಾ, ಜಮಾತ್ ಉಲೇಮಾ-ಇ-ಹಿಂದ್ ಸಂಘಟನೆ, ಹಿಂದೂ ಮಹಾಸಭಾ ಸೇರಿದಂತೆ ಅನೇಕ ಸಂಘಟನೆಗಳು ತೀರ್ಪು ಮರುಪರಿಶೀಲಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದವು.

Intro:Body:

ಅಯೋಧ್ಯೆ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮರಪರಿಶೀಲನಾ ಅರ್ಜಿ ಸುಪ್ರೀಕೋರ್ಟ್​ನಿಂದ ವಜಾ 

ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ವಿಚಾರಕ್ಕೆ  ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂಕೋರ್ಟ್​ ನೀಡಿದ್ದ ಮಹತ್ವದ  ತೀರ್ಪು ಪ್ರಶ್ನೆ ಮಾಡಿ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿ ಸುಪ್ರೀಂಕೋರ್ಟ್​ನಿಂದ ವಜಾಗೊಂಡಿವೆ. 

ಅಯೋಧ್ಯೆಯಲ್ಲಿ ವಿವಾದಿತ 2.77 ಎಕರೆ ಭೂಮಿ ರಾಮ ಜನ್ಮಭೂಮಿ ಕಟ್ಟಲು ನೀಡಿ, ಹಾಗೂ ಬಾಬ್ರಿ ಮಸೀದಿಗಾಗಿ ಬೇರೆ ಕಡೆ 5 ಎಕರೆ ಜಮೀನು ನೀಡಿ ಸುಪ್ರೀಂಕೋರ್ಟ್​ ಮಹತ್ವದ ಆದೇಶ ಹೊರಹಾಕಿತ್ತು. ಆದರೆ ಈ ತೀರ್ಪು ಪ್ರಶ್ನೆ ಮಾಡಿ 18 ವಿವಿಧ ಸಂಘಟನೆಗಳು ಮರುಪರಿಶೀಲನಾ ಅರ್ಜಿ ಸಲ್ಲಿಕೆ ಮಾಡಿದ್ದವು. ಅದರ ವಿಚಾರಣೆ ನಡೆಸಿದ ಸಿಜೆಐ ಎಸ್​ಎ ಬೋಬ್ಡೆ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಎಲ್ಲ ಅರ್ಜಿ ವಜಾಗೊಳಿಸಿ ಮಹತ್ವದ ಆದೇಶ ಹೊರಹಾಕಿದೆ.  

ಸುಪ್ರೀಂಕೋರ್ಟ್​ ನೀಡಿದ್ದ ತೀರ್ಪು ಪ್ರಶ್ನೆ ಮಾಡಿ ಜಮೀಯತ್ ಉಲೇಮಾ ಇ ಹಿಂದ್ ಸಂಘಟನೆ,ಹಿಂದೂ ಮಹಾಸಭಾ ಸೇರಿದಂತೆ ಅನೇಕ ಸಂಘಟನೆಗಳು ಮರುಪರಿಶೀಲನಾ ಅರ್ಜಿ ಸಲ್ಲಿಕೆ ಮಾಡಿದ್ದವು. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.