ಅಮರಾವತಿ/ದೆಹಲಿ: ಈ ಹಿಂದಿನ ರಾಜ್ಯ ಚುನಾವಣಾ ಆಯುಕ್ತ ರಮೇಶ್ ಕುಮಾರ್ ಅವರನ್ನು ಮತ್ತೆ ರಾಜ್ಯ ಚುನಾವಣಾ ಆಯುಕ್ತರನ್ನಾಗಿ ಮುಂದುವರಿಸಲು ಅನುಮತಿಸುವ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ರಮೇಶ್ ಕುಮಾರ್ ಅವರನ್ನು ವಜಾಗೊಳಿಸುವ ಸುಗ್ರೀವಾಜ್ಞೆಯನ್ನು ಪರಿಚಯಿಸುವಲ್ಲಿ ಸರ್ಕಾರದ ಕ್ರಮಗಳ ಬಗ್ಗೆ ನ್ಯಾಯಾಲಯವು ತೃಪ್ತಿ ಹೊಂದಿಲ್ಲ. ಹೀಗಾಗಿ ಸಾಂವಿಧಾನಿಕ ಕಾರ್ಯಕಾರಿಗಳೊಂದಿಗೆ ಆಟವಾಡಬೇಡಿ ಎಂದು ಸುಪ್ರೀಂ, ಆಂಧ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ರಮೇಶ್ ಕುಮಾರ್ ಅವರನ್ನು ಮತ್ತೆ SECಯಾಗಿ ಮುಂದುವರಿಸುವ ರಾಜ್ಯ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿಯಲು ಆಂಧ್ರ ಪ್ರದೇಶ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ಮುಖ್ಯ ನ್ಯಾಯಮೂರ್ತಿ ಅರವಿಂದ್ ಬೊಬ್ಡೆ, ನ್ಯಾಯಮೂರ್ತಿ ಎ.ಎಸ್.ಬೋಪಣ್ಣ, ನ್ಯಾಯಮೂರ್ತಿ ಹೃಷಿಕೇಶ್ ರೈ ಅವರನ್ನೊಳಗೊಂಡ ನ್ಯಾಯಪೀಠವು ರಾಜ್ಯ ಸರ್ಕಾರದ ಮನವಿಯನ್ನು ಆಲಿಸಿ ಹೈಕೋರ್ಟ್ ತೀರ್ಪಿಗೆ ತಡೆಯೊಡ್ಡಿದೆ.