ETV Bharat / bharat

ಮುಸ್ಲಿಂ ಮಹಿಳೆಯರಿಗೂ ಮಸೀದಿ ಪ್ರವೇಶ: ಅರ್ಜಿ ವಜಾಗೊಳಿಸಿದ ಸುಪ್ರೀಂ - undefined

ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗಯಿ ಅವರಿದ್ದ ಪೀಠ, ಮುಸ್ಲಿಂ ಮಹಿಳೆಯರಿಗೆ ಮಸೀದಿಯಲ್ಲಿ ಪ್ರವೇಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದಾರೆ. ಮುಸ್ಲಿಂ ಮಹಿಳೆಯರೇ ಈ ಬಗ್ಗೆ ಪ್ರಶ್ನೆ ಮಾಡಲಿ. ಆಗ ಪರಿಗಣಿಸುತ್ತೇವೆ ಎಂದೂ ಹೇಳಿದ್ದಾರೆ.

Supreme Court
author img

By

Published : Jul 9, 2019, 11:12 AM IST

ನವದೆಹಲಿ: ಮುಸ್ಲಿಂ ಮಹಿಳೆಯರಿಗೆ ಮಸೀದಿಯಲ್ಲಿ ಪ್ರವೇಶ ನೀಡಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿದೆ.

ಸುಪ್ರೀಂಕೋರ್ಟ್​ ಮುಖ್ಯನ್ಯಾಯಮೂರ್ತಿ ರಂಜನ್​ ಗೊಗಯಿ ಅವರಿದ್ದ ಪೀಠ, ಮುಸ್ಲಿಂ ಮಹಿಳೆಯರೇ ಈ ಬಗ್ಗೆ ಪ್ರಶ್ನೆ ಮಾಡಲಿ. ಆಗ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.

ಕೇರಳದ ಹಿಂದೂ ಮಹಾಸಭಾದ ಅಧ್ಯಕ್ಷ ಸ್ವಾಮಿ ದತ್ತಾತ್ರೇಯ ಸಾಯಿ ಸ್ವರೂಪ್ ನಾಥ್​​ ಅವರು ಈ ಬಗ್ಗೆ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್​ ರದ್ದು ಮಾಡಿದ್ದರಿಂದ ಸುಪ್ರೀಂ ಮೆಟ್ಟಿಲು ಹತ್ತಿದ್ದರು. ನಿನ್ನೆ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ, ಕೇರಳ ಹೈಕೋರ್ಟ್​ ನಿರ್ಧಾರದಲ್ಲಿ ಮಧ್ಯಪ್ರವೇಶಿದುವ ಅಗತ್ಯತೆ ಇಲ್ಲ ಎಂದಿದೆ.

ತಮ್ಮ ಅರ್ಜಿಯಲ್ಲಿ ಬುರ್ಖಾ ಬ್ಯಾನ್ ಮಾಡಬೇಕೆಂದೂ ಸ್ವರೂಪ್ ನಾಥ್​​ ಮನವಿ ಮಾಡಿದ್ದರು. ಇದರಿಂದ ಸಮಾಜ ವಿರೋಧಿ ಚಟುವಟಿಕೆ ನಡೆಯಲು ಅನುಕೂಲವಾಗುತ್ತೆ. ಅಲ್ಲದೆ, ಅಸಮಾನತೆಯೂ ತಲೆದೋರುತ್ತ ಎಂದಿದ್ದರು. ಈ ಮನವಿ ಸಹ ತಿರಸ್ಕೃತಗೊಂಡಿದೆ.

Intro:Body:Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.