ನವದೆಹಲಿ/ಬೆಂಗಳೂರು: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಅನುದಾನರಹಿತ ಹಾಗೂ ಖಾಸಗಿ ಶಾಲೆಯನ್ನು ಹೊರಗಿಡುವ ಕರ್ನಾಟಕ ಸರ್ಕಾರದ ಶೇ.25ರ ಮೀಸಲು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿಸಿದೆ.
2019ರ ಶಿಕ್ಷಣ ಹಕ್ಕು ಕಾಯ್ದೆಯ ಕಾನೂನು ಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ಬಗ್ಗೆ ಜಸ್ಟೀಸ್ ಎನ್.ವಿ.ರಮಣ ಅರ್ಜಿ ಸಂಬಂಧ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದಾರೆ. 2019ರ ಮೇ 31ರಂದು ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಿರಾಕರಿಸಿದೆ.
2012ರ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಕಾಯ್ದೆ ನಿಯಮ ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಇದೇ ತೀರ್ಪನ್ನು ಪ್ರಶ್ನಿಸಿ ಹಿರಿಯ ವಕೀಲೆ ಮೀನಾಕ್ಷಿ ಅರೋರಾ ಸುಪ್ರೀಂ ಮೆಟ್ಟಿಲೇರಿದ್ದರು.
ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿರುವ ಕಾರಣ, ಸರ್ಕಾರ ಆರ್ಟಿಇ ಕಾಯಿದೆಗೆ ತಿದ್ದುಪಡಿ ತಂದು ಸರ್ಕಾರಿ ಶಾಲೆ ಅಥವಾ ಸರ್ಕಾರಿ ಅನುದಾನಿತ ಶಾಲೆಗಳು ಇಲ್ಲದ ಸ್ಥಳದಲ್ಲಿ ಮಾತ್ರ ಖಾಸಗಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಲು ಅನುಮತಿ ನೀಡುವುದಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದನ್ನು ಪ್ರಶ್ನಿಸಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ತಿದ್ದುಪಡಿಯನ್ನ ಎತ್ತಿ ಹಿಡಿದು ಆದೇಶ ನೀಡಿತ್ತು.