ETV Bharat / bharat

ಮಧ್ಯಪ್ರದೇಶ ಕೈ-ಕಮಲ ಕೋಲಾಹಲ: ವಿಶ್ವಾಸಮತ ಸಂಬಂಧ ಸುಪ್ರೀಂನಲ್ಲಿಂದು ವಿಚಾರಣೆ

ಮಧ್ಯಪ್ರದೇಶದ ರಾಜಕೀಯ ಬಿಕ್ಕಟ್ಟಿನ ಸಂಬಂಧ ಇಂದು ಸುಪ್ರೀಂಕೋರ್ಟ್​ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ.​ ಕಾಂಗ್ರೆಸ್​ ಸರ್ಕಾರದ ಬುಹುಮತ ಸಾಬೀತಿನ ಕುರಿತಂತೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಶಿವರಾಜ್​ ಸಿಂಗ್​ ಚೌಹಾಣ್ ಹಾಗೂ ಇತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ.

MP CM Shivraj Singh Chouhan to hold floor test
ಬಹುಮತ ಸಾಬೀತು ಪ್ರಕ್ರಿಯೆ
author img

By

Published : Mar 18, 2020, 8:09 AM IST

Updated : Mar 18, 2020, 9:09 AM IST

ನವದೆಹಲಿ: ಮಧ್ಯಪ್ರದೇಶದ ರಾಜಕೀಯ ಬಿಕ್ಕಟ್ಟು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದು, ಕಾಂಗ್ರೆಸ್​ ಸರ್ಕಾರದ ಬುಹುಮತ ಸಾಬೀತಿಗೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಶಿವರಾಜ್​ ಸಿಂಗ್​ ಚೌಹಾಣ್ ಹಾಗೂ ಇತರರು ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ.

22 ಶಾಸಕರು ರಾಜೀನಾಮೆ ನೀಡಿರುವುದರಿಂದ ಕಾಂಗ್ರೆಸ್​ ಸರ್ಕಾರಕ್ಕೆ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಶಾಸಕರ ರಾಜೀನಾಮೆ ಹಿನ್ನೆಲೆ ಬಹುಮತ ಸಾಬೀತು ಪ್ರಕ್ರಿಯೆ ಕೈಗೊಳ್ಳುವ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟ್​ನಲ್ಲಿ ಬಿಜೆಪಿ ನಾಯಕರು ಮನವಿ​ ಸಲ್ಲಿಸಿದ್ದರು. ಇಂದು ಬೆಳಗ್ಗೆ ಅರ್ಜಿ ವಿಚಾರಣೆ ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಮಹತ್ವದ್ದಾಗಿದೆ.

ಇನ್ನೊಂದೆಡೆ, ರಾಜೀನಾಮೆ ನೀಡಿರುವ ಕಾಂಗ್ರೆಸ್ಸಿನ ಎಲ್ಲಾ 22 ಮಂದಿ ಶಾಸಕರು ಬೆಂಗಳೂರಿನ ರೆಸಾರ್ಟ್​ನಲ್ಲೇ ವಾಸ್ತವ್ಯ ಮುಂದುವರೆಸಿದ್ದಾರೆ​. ಪಕ್ಷದ ಪ್ರಬಲ ನಾಯಕರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅದಾಗಲೇ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೋರ್ಟ್​ ಆದೇಶದ ಮೇಲೆ ಮಧ್ಯಪ್ರದೇಶದಲ್ಲಿ ಮುಂದಿನ ರಾಜಕೀಯ ಬೆಳವಣಿಗೆಗಳು ಅವಲಂಬಿತವಾಗಿವೆ.

ಇನ್ನು ಬಂಡಾಯ ಶಾಸಕರನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕ ದಿಗ್ವಿಜಯ್​ ಸಿಂಗ್ ಬೆಳ್ಳಂಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದು, ಅವರಿಗೆ ರೆಸಾರ್ಟ್​ಗೆ ತೆರಳಲು ಪೊಲೀಸರು ಅವಕಾಶ ನೀಡಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಸಿಂಗ್ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಂಜಾಗೃತಾ ಕ್ರಮವಾಗಿ ಅವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Last Updated : Mar 18, 2020, 9:09 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.