ಹೈದರಾಬಾದ್ : ನಗರದ ಅಭಿವೃದ್ಧಿಗೆ ಅಡ್ಡಿಯುಂಟು ಮಾಡುವವರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮುಂದುವರಿಯಲಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಹೈದರಾಬಾದ್ನಲ್ಲಿ 75 ಸಾವಿರಕ್ಕೂ ಅಧಿಕ ವಿದೇಶಿಗರು ಅಕ್ರಮವಾಗಿ ವಾಸಿಸುತ್ತಿದ್ದಾರೆ. ಟಿಎಆರ್ಎಸ್ ಮತ್ತು ಐಎಂಎ ಪಕ್ಷಗಳು ರಾಜಕೀಯ ಲಾಭಕ್ಕಾಗಿ ರೋಹಿಂಗ್ಯಾಗಳನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು.
ಯಾವ ನಿಯಮಗಳಡಿ ರೋಹಿಂಗ್ಯಾಗಳಿಗೆ ಮತ ಚಲಾಯಿಸುವ ಹಕ್ಕು ನೀಡಿದ್ದೀರಿ ಎಂದು ತೆಲಂಗಾಣ ಸರ್ಕಾರವನ್ನು ಪ್ರಶ್ನಿಸಿದರು. ತೆಲಂಗಾಣ ಸರ್ಕಾರ ದೂರು ನೀಡಿದ್ರೆ, ರೋಹಿಂಗ್ಯಾಗಳ ವಿರುದ್ಧ ಕೇಂದ್ರ ಸರ್ಕಾರ ಕ್ರಮಕೈಗೊಳ್ಳುತ್ತದೆ ಎಂದು ಭರವಸೆ ನೀಡಿದರು.
ಪ್ರವಾಹ ಹಾನಿ ಕುರಿತು ರಾಜ್ಯ ಸರ್ಕಾರ ಈವರೆಗೆ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ಕಳಿಸಿಲ್ಲ. ವರದಿ ಕಳಿಸಿದ್ದರೆ, ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ಸಿಗುತ್ತಿತ್ತು ಎಂದರು. ಕೇಂದ್ರ ಸರ್ಕಾರವು ತೆಲಂಗಾಣಕ್ಕೆ ಜವಳಿ ಉದ್ಯಾನವನ್ನು ಮಂಜೂರು ಮಾಡಿದೆ.
ಮೋದಿ ಸರ್ಕಾರ ಜಾರಿಗೆ ತಂದಿರುವ ಅನೇಕ ಜನಪರ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸುತ್ತಿಲ್ಲ. ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ತಂದಿದ್ದರೆ, ಕೋವಿಡ್ ಸೋಂಕಿತರಿಗೆ ಅನುಕೂಲವಾಗುತ್ತಿತ್ತು ಎಂದರು.