ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ನಿನ್ನೆ ತೀವ್ರ ಹೃದಯಾಘಾತದಿಂದ ಏಮ್ಸ್ ಆಸ್ಪತ್ರೆಯಲ್ಲಿ ತಡರಾತ್ರಿ ಕೊನೆಯುಸಿರೆಳಿದಿದ್ದರು. ಇದೀಗ ಸಕಲ- ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಸಲಾಯಿತು.
67 ವರ್ಷದ ಸುಷ್ಮಾ ಸ್ವರಾಜ್ ಮೊದಲ ಮಹಿಳಾ ವಿದೇಶಾಂಗ ಸಚಿವೆ ಹಾಗೂ ದೆಹಲಿಯ ಮೊದಲ ಮಹಿಳಾ ಸಿಎಂ ಎಂಬ ಹೆಗ್ಗಳಿಕೆ ಗಳಿಸಿದ್ದರು.
ನವದೆಹಲಿ ಲೋಧಿ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನಡೆಸಲಾಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು, ಬಿಜೆಪಿ ಹಿರಿಯ ಮುಖಂಡ ಎಲ್ಕೆ ಅಡ್ವಾಣಿ,ರಾಜನಾಥ್ ಸಿಂಗ್, ಜೆ.ಪಿ ನಡ್ಡಾ, ರವಿಶಂಕರ್ ಪ್ರಸಾದ್, ಪಿಯೂಷ್ ಗೋಯಲ್ ಮತ್ತು ಇತರ ಬಿಜೆಪಿ ನಾಯಕರು ಸುಷ್ಮಾ ಸ್ವರಾಜ್ ಅವರ ಪಾರ್ಥಿವ ಶರೀರವನ್ನು ಹೆಗಲ ಮೇಲೆ ಹೊತ್ತು ಸಾಗಿಸಿದರು.