ಬೆಂಗಳೂರು: ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂತಿಮ ನಮನ ಸಲ್ಲಿಸಿದರು.
ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಷ್ಮಾ ಸ್ವರಾಜ್ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ ಎಂದು ವಿಷಾದ ವ್ಯಕ್ತಪಡಿಸಿದರು.
ಕರ್ನಾಟಕ ಭವನದಿಂದ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯದ ಮುಖಂಡರು ನವದೆಹಲಿಯ ಸುಷ್ಮಾ ಸ್ವರಾಜ್ ನಿವಾಸಕ್ಕೆ ಭೇಟಿ ನೀಡಿ ಪಾರ್ಥಿವ ಶರೀರದ ದರ್ಶನ ಪಡೆದು ಗೌರವ ಸಲ್ಲಿಸಿದರು.