ನವದೆಹಲಿ: ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3 ರಲ್ಲಿ ಅನುಮಾನಾಸ್ಪದ ಬ್ಯಾಗ್ವೊಂದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ಶಂಕಿತ ಬ್ಯಾಗ್ ಅನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದರು. ಪೊಲೀಸ್ ತಪಾಸಣಾ ದಳ ಈ ಬ್ಯಾಗ್ ಪರಿಶೀಲನೆ ನಡೆಸಿತ್ತು. ಈ ಬ್ಯಾಗ್ನಲ್ಲಿ ಅಪಾಯಕಾರಿ ಆರ್ಡಿಎಕ್ಸ್ ಇರುವುದು ಪತ್ತೆಯಾಗಿದೆ ಎಂಬ ಮಾಹಿತಿ ಹೊರ ಬಿದ್ದಿದೆ.
ತಡರಾತ್ರಿ 3 ಗಂಟೆ ಸುಮಾರಿಗೆ ಈ ಬಗ್ಗೆ ವಿಮಾನ ನಿಲ್ದಾಣ ಪೊಲೀಸರಿಗೆ ಕರೆಯೊಂದು ಬಂದಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಟರ್ಮಿನಲ್ ಮೂರನ್ನು ಪ್ರಯಾಣಿಕರಿಗೆ ನಿರ್ಬಂಧಿಸಿತ್ತು. ಇನ್ನು ಟರ್ಮಿನನಲ್ 3 ರ ರಸ್ತೆಗಳನ್ನು ಸಹ ಬಂದ್ ಮಾಡಲಾಗಿತ್ತು.