ETV Bharat / bharat

ಕೊರೊನಾ ಹೆಚ್ಚಾಗಲು ತಬ್ಲಿಘಿ ಸಭೆ ಕಾರಣ: ಸಚಿವ ಕಿಶನ್​ ರೆಡ್ಡಿ

ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾತ್ ಸಭೆ ಕೊರೊನಾ ವೈರಸ್ ಸೋಂಕು ಅನೇಕ ಜನರಿಗೆ ಹರಡಲು ಕಾರಣವಾಯಿತು ಎಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಆರೋಪಿಸಿದ್ದಾರೆ.

ಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾತ್ ಸಭೆ

author img

By

Published : Sep 21, 2020, 1:14 PM IST

ನವದೆಹಲಿ: ಮಾರ್ಚ್‌ನಲ್ಲಿ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದಿದ್ದ ತಬ್ಲಿಘಿ ಜಮಾತ್ ಸಭೆ ಕೊರೊನಾ ವೈರಸ್ ಸೋಂಕು ಅನೇಕ ಜನರಿಗೆ ಹರಡಲು ಕಾರಣವಾಯಿತು ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ದೆಹಲಿ ಪೊಲೀಸರು 233 ತಬ್ಲಿಘಿ ಜಮಾತ್ ಸದಸ್ಯರನ್ನು ಬಂಧಿಸಿದ್ದಾರೆ. ಮಾರ್ಚ್ 29ರಿಂದ ಸುಮಾರು 2,361 ಜನರನ್ನು ಸಂಘಟನೆಯ ಪ್ರಧಾನ ಕಚೇರಿಯಿಂದ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.

ಜಮಾತ್ ಮುಖ್ಯಸ್ಥ ಮೌಲಾನಾ ಮೊಹಮ್ಮದ್ ಸಾದ್ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ದೆಹಲಿ ಪೊಲೀಸರ ವರದಿ ಪ್ರಕಾರ, "ಅಧಿಕಾರಿಗಳು ಹೊರಡಿಸಿದ ಮಾರ್ಗಸೂಚಿಗಳು ಮತ್ತು ಆದೇಶಗಳನ್ನು ಉಲ್ಲಂಘಿಸಿ, ಒಂದು ಬೃಹತ್ ಸಭೆ ನಡೆಸಲಾಯಿತು. ಸಾಮಾಜಿಕ ಅಂತರ, ಮಾಸ್ಕ್​, ಸ್ಯಾನಿಟೈಸರ್​ ಬಳಕೆ ಮಾಡದೆ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದರಿಂದ ಕೊರೊನಾ ಸೋಂಕು ಹೆಚ್ಚಾಗಿ ಹರಡಲು ಕಾರಣವಾಗಿದೆ" ಎಂದು ಸಚಿವರು ಆರೋಪಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.