ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಪ್ರತಿಮೆ ತೆರವು ವಿಚಾರವಾಗಿ ಶಿವಸೇನೆ ಮತ್ತೆ ಕ್ಯಾತೆ ತೆಗೆದು ಪ್ರತಿಭಟನೆಗೆ ಮುಂದಾಗಿದೆ.
ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪಿಸಲು ಆಗ್ರಹಿಸಿ ಶಿವಸೇನೆ ಮುಖಂಡ ವಿಜಯ್ ಶಾಮರಾವ್ ದೇವನೆ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿದ ತಹಶೀಲ್ದಾರ್ ಅಶೋಕ್ ಘುರಾನೆ, ಮಣಗುತ್ತಿ ಗ್ರಾಮದ ಜನರು ಮೂರ್ತಿ ಪ್ರತಿಷ್ಠಾಪಿಸುತ್ತಿದ್ದಾರೆ. ಆದ್ರೆ ನಮಗೆ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಅಧಿಕೃತಿ ಮಾಹಿತಿ ಬಂದ ನಂತರ ನಿಯಮನುಸಾರವಾಗಿ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.
ಮಹಾರಾಷ್ಟ್ರದ ಗಡಿ ಭಾಗ ಕವಳಿಕಟ್ಟಿ ಗ್ರಾಮದಲ್ಲಿ ಕೈಗೊಂಡಿರುವ ಪ್ರತಿಭಟನೆಯಲ್ಲಿ ಶಿವಸೇಸೆಯ ಸುಮಾರು 80 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ದರು.