ETV Bharat / bharat

ಭಾರತ - ಚೀನಾ ಗಡಿ ವಿಚಾರ - ಸೇನೆ, ರಾಜತಾಂತ್ರಿಕ ಮಟ್ಟದಲ್ಲೇ ಬಗೆಹರಿಸಿಕೊಳ್ಳುತ್ತೇವೆ : ರಾಜನಾಥ್‌ ಸಿಂಗ್‌ - ಇಂಡೋ-ಚೀನಾ ಸಂಬಂಧ

ಪೂರ್ವ ಲಡಾಕ್‌ನಲ್ಲಿ ಉಂಟಾಗಿರುವ ಭಾರತ - ಚೀನಾ ಗಡಿ ಸಮಸ್ಯೆಯನ್ನ ಸೇನೆ ಮತ್ತು ರಾಜತಾಂತ್ರಿಕ ಮಟ್ಟದ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದಾಗಿ ರಕ್ಷಣಾ ಸಚಿವ ರಾಜ‌ನಾಥ್‌ ಸಿಂಗ್‌ ತಿಳಿಸಿದ್ದಾರೆ.

talks-at-military-diplomatic-levels-on-to-resolve-ladakh-standoff-rajnath
ಭಾರತ-ಚೀನಾ ಗಡಿ ವಿಚಾರವನ್ನು ಸೇನೆ, ರಾಜತಾಂತ್ರಿಕ ಮಟ್ಟದಲ್ಲೇ ಬಗೆಹರಿಸಿಕೊಳ್ಳುತ್ತೇವೆ : ರಾಜನಾಥ್‌ ಸಿಂಗ್‌
author img

By

Published : May 30, 2020, 10:00 PM IST

ನವದೆಹಲಿ: ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ)ಯಲ್ಲಿ ಭಾರತ-ಚೀನಾ ಸೇನೆಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಸೇನೆ ಹಾಗೂ ರಾಜತಾಂತ್ರಿಕ ಮಟ್ಟದ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸ್ಪಷ್ಟಪಡಿಸಿದ್ದಾರೆ.

ಯಾವುದೇ ಕಾರಣಕ್ಕೂ ಭಾರತ ಗೌರವಕ್ಕೆ ಧಕ್ಕೆಯಾಗದಂತೆ ಸೇನೆ ಮತ್ತು ರಾಜತಾಂತ್ರಿಕ ಮಟ್ಟದ ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತೇವೆ. ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್‌ ಟಿ ಎಸ್ಪರ್‌ ದೂರವಾಣಿ ಕರೆ ಮಾಡಿ ಗಡಿ ವಿಚಾರವನ್ನು ಕಾರ್ಯವಿಧಾನಗಳು ಮತ್ತು ಮಾತುಕತೆಯ ಮೂಲಕ ಸಮಸ್ಯೆ ಇತ್ಯಾರ್ಥ ಪಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ಸಚಿವರು ಹೇಳಿದರು.

ಕಳೆದ ಬುಧವಾರವಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಉಭಯ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಬಗೆಹರಿಸಲು ನಾವು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂಬ ಪ್ರಸ್ತಾಪ ಇಟ್ಟಿದ್ದರು. ಎರಡು ದಿನಗಳ ಹಿಂದಷ್ಟೇ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಟ್ರಂಪ್‌ ಅವರ ಪ್ರಸ್ತಾಪ ಪರೋಕ್ಷವಾಗಿ ತಿರಸ್ಕರಿಸಿತ್ತು.

ಎರಡು ರಾಷ್ಟ್ರಗಳ ನಡುವಿನ ಸಮಸ್ಯೆ ಬಗೆಹರಿಸಿಕೊಳ್ಳಲು ಮೂರನೇ ವ್ಯಕ್ತಿಯ ಅವಶ್ಯಕತೆ ಇಲ್ಲ ಎಂಬುದನ್ನು ಎಸ್ಪರ್‌ಗೆ ದೂರವಾಣಿ ಕರೆ ಮೂಲಕ ತಿಳಿಸಿರುವುದಾಗಿ ರಾಜನಾಥ್‌ ಸಿಂಗ್‌ ಸ್ಪಷ್ಪಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.