ಚೆನ್ನೈ: ಕೋವಿಡ್ 19 ಸೋಂಕು ಹರಡುತ್ತಿರುವ ಮಧ್ಯೆಯೂ ಕರ್ತವ್ಯ ನಿರತರಾಗಿರುವ ವರದಿಗಾರ ಕೊರೊನಾದಿಂದ ಮೃತಪಟ್ಟರೆ ಅಂತಹ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಹೇಳಿದ್ದಾರೆ.
ಪತ್ರಕರ್ತರು ಕರ್ತವ್ಯಕ್ಕೆ ಹೋಗುವ ವೇಳೆ ಕೊರೊನಾ ಸೋಂಕಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಯಾರಿಗಾದರೂ ಸೋಂಕು ತಗುಲಿದರೆ ಅಂತವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸುತ್ತದೆ. ಒಂದು ವೇಳೆ ಪ್ರಾಣಹಾನಿಯಾದರೆ 5 ಲಕ್ಷ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ತಮಿಳುನಾಡಿನಲ್ಲಿ ಕಳೆದ 24 ಗಂಟೆಗಳಲ್ಲಿ 25 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಸಿಎಂ ಪಳನಿಸ್ವಾಮಿ ಮಾಹಿತಿ ನೀಡಿದ್ದಾರೆ.