ETV Bharat / bharat

ಮಹಿಳಾ ದೂರುದಾರರಿಗೆ ಕರೆ ಮಾಡಿ ಅನುಚಿತ ವರ್ತನೆ: ಪೊಲೀಸ್ ಇನ್ಸ್​ಪೆಕ್ಟರ್​ಗೆ ಕಡ್ಡಾಯ ನಿವೃತ್ತಿ ಶಿಕ್ಷೆ - ಪೊಲೀಸ್ ಅಮಾನತು

ಮಹಿಳೆಯ ಜೊತೆ ಅನುಚಿತ ವರ್ತನೆ ತೋರಿದ ಇನ್ಸ್‌ಪೆಕ್ಟರ್​ಗೆ ಕಡ್ಡಾಯ ನಿವೃತ್ತಿಯ ಶಿಕ್ಷೆ ನೀಡಲಾಗಿದೆ. ಪೆರಂಬಲೂರ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ನಡೆದಿದೆ.

Tamil Nadu cop
ಪೊಲೀಸ್
author img

By

Published : Jul 9, 2020, 10:00 PM IST

ತಿರುಚಿರಾಪಳ್ಳಿ (ತಮಿಳುನಾಡು): ಮಧ್ಯರಾತ್ರಿಯಲ್ಲಿ ಮಹಿಳೆಗೆ ದೂರವಾಣಿ ಕರೆ ಮಾಡಿ ಮತ್ತು ಆಕೆ ನೀಡಿದ ದೂರಿಗೆ ಸಂಬಂಧಿಸಿದಂತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ 48 ವರ್ಷದ ಪೊಲೀಸ್ ಇನ್ಸ್‌ಪೆಕ್ಟರ್​ಗೆ ಕಡ್ಡಾಯ ನಿವೃತ್ತಿ ಶಿಕ್ಷೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಿಳೆಯ ಜೊತೆ ಅನುಚಿತ ವರ್ತನೆ ತೋರಿದ ಇನ್ಸ್‌ಪೆಕ್ಟರ್​ಗೆ ಕಡ್ಡಾಯ ನಿವೃತ್ತಿಯ ಶಿಕ್ಷೆ ನೀಡಲಾಗಿದೆ. ಪೆರಂಬಲೂರ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ನಡೆದಿದೆ.

ಇನ್‌ಸ್ಪೆಕ್ಟರ್‌ ಮಹಿಳೆಗೆ ಮಧ್ಯರಾತ್ರಿ ಕರೆ ಮಾಡಿ ಅನಗತ್ಯವಾದ ಮಾತುಕತೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ವಿಚಾರಣೆ ನಡೆಸಲಾಗಿದೆ. ಮಹಿಳೆಯ ಆರೋಪದಲ್ಲಿ ಸತ್ಯಾಂಶ ಇದೆ ಎಂಬುದು ಗಮನಕ್ಕೆ ಬಂದಿದೆ. ಈ ಹಿಂದೆಯೂ ಇದೇ ಇನ್‌ಸ್ಪೆಕ್ಟರ್‌ ವಿರುದ್ಧ ಇಂತಹ ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ ಅವರನ್ನು ಪೆರಂಬಲೂರಿಗೆ ವರ್ಗಾವಣೆ ಮಾಡಲಾಗಿತ್ತು. ಈ ಹಿಂದಿನ ಆರೋಪಗಳನ್ನು ಪರಿಗಣಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.