ETV Bharat / bharat

ಆಂಧ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು

ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಜ್ಯದ ಡಿಜಿಪಿ ದಾಮೋದರ್ ಗೌತಮ್ ಸಾವಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು
author img

By

Published : Aug 5, 2020, 7:22 AM IST

ಅಮರಾವತಿ (ಆಂಧ್ರಪ್ರದೇಶ): ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಜ್ಯದ ಡಿಜಿಪಿ ದಾಮೋದರ್ ಗೌತಮ್ ಸಾವಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಚಂದ್ರಬಾಬು ನಾಯ್ಡು ಬರೆದ ಪತ್ರದಲ್ಲಿ ಕೆಲ ಘಟನೆಗಳ ಕುರಿತು ಉಲ್ಲೇಖಿಸಲಾಗಿದೆ. "ಆಂಧ್ರಪ್ರದೇಶದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆಯುತ್ತಿದೆ. ನಕರೆಕಲ್ ಮತ್ತು ವೆಲಿಗೋಡು ಮಂಡಲದಲ್ಲಿ ರಕ್ಷಾ ಬಂಧನದ ದಿನವೇ ದುಷ್ಕರ್ಮಿಗಳು ಬುಡಕಟ್ಟು ಜನಾಂಗದ ಮಹಿಳೆಗೆ ಕಿರುಕುಳ ನೀಡಿ, ಅತ್ಯಾಚಾರ ಎಸೆಗಿ ಕೊಲೆ ಮಾಡಿದ್ದಾರೆ. ಇವಿಷ್ಟೇ ಅಲ್ಲದೇ, ಹಲವಾರು ಮೇಲ್ಮನವಿಗಳ ಹೊರತಾಗಿಯೂ, ಅಪರಾಧಿಗಳ ವಿರುದ್ಧ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ನಾಯ್ಡು ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಹದಗೆಟ್ಟ ಹಿನ್ನೆಲೆಯಲ್ಲಿ ಅಪರಾಧಗಳು ಮತ್ತು ದೌರ್ಜನ್ಯಗಳು ರಾಜ್ಯಾದ್ಯಂತ ಏರಿಕೆಯಾಗುತ್ತಿವೆ. ಜನರ ಜೀವನ ಮತ್ತು ಸ್ವಾಭಿಮಾನಕ್ಕೆ ಯಾವುದೇ ಸುರಕ್ಷತೆ ಇಲ್ಲ. ಅಪರಾಧಗಳನ್ನು ತಡೆಯಲು ಯಾರೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಗುಂಟೂರು ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆ ಮಂತ್ರು ಬಾಯಿ ಎಂಬುವರ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲ್ಲಲಾಗಿತ್ತು. ಕರ್ನೂಲ್ ಜಿಲ್ಲೆಯಲ್ಲಿ ಮತ್ತೊಬ್ಬ ಬುಡಕಟ್ಟು ಮಹಿಳೆ ತನ್ನ ಗಂಡನ ಮುಂದೆಯೇ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಳು. ಆದರೆ, ಈ ಕುರಿತು ಕೇಸು ದಾಖಲಾಗಿದ್ದು, ಬುಡಕಟ್ಟು ಸಂಘಗಳು ಆಂದೋಲನವನ್ನು ಪ್ರಾರಂಭಿಸಿದ ಬಳಿಕ ಎಂಬುದು ವಿಪರ್ಯಾಸ ಎಂದು ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.