ಗುವಾಹಟಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಅಸ್ಸೋಂನಲ್ಲೂ ಇದರ ಕಾವು ತುಸು ಜೋರಾಗಿ ನಡೆಯುತ್ತಿದೆ, ಕೇಂದ್ರ ಸರ್ಕಾರದ ಈ ಮಸೂದೆ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ಶಾಲಾ ಶಿಕ್ಷಕಿವೋರ್ವರು ಇದೀಗ ಕೆಲಸ ಕಳೆದುಕೊಂಡಿದ್ದಾರೆ.
ಜವಾಹರ್ ನವೋದಯ ವಿದ್ಯಾಲಯದ ವಿದ್ಯಾರ್ಥಿಗಳು ಪೌರತ್ವ ತಿದ್ದುಪಡಿ ಕಾಯ್ದೆ -2019 ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಅದರಲ್ಲಿ ಭಾಗಿಯಾಗಿದ್ದಕ್ಕಾಗಿ ಶಿಕ್ಷಕಿಯನ್ನ ಕೆಲಸದಿಂದ ವಜಾಗೊಳಿಸಿ ಪ್ರಾಶುಂಪಾಲರು ಆದೇಶ ಹೊರಡಿಸಿದ್ದಾರೆ.
ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲ ಶಿಕ್ಷಕರು ವಿದ್ಯಾರ್ಥಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಈ ವೇಳೆ ಶಿಕ್ಷಕಿ ಬಂದಿತಾ ಬೋರಾಹ್ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಅವರನ್ನ ವಜಾಗೊಳಿಸಿದ್ದಾರೆ. ಅವರನ್ನ ಕೆಲಸದಿಂದ ತೆಗೆದು ಹಾಕುತ್ತಿದ್ದಂತೆ ವಿದ್ಯಾರ್ಥಿಗಳು ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.