ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಪ್ರಯಾಣಿಸುತ್ತಿದ್ದ ಖಾಸಗಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಕೆಲ ಗಂಟೆಗಳ ಕಾಲ ತಲೈವಾ ತೊಂದರೆ ಅನುಭವಿಸುವಂತಾಯ್ತು.
ಕೆಲವೇ ಕ್ಷಣಗಳಲ್ಲಿ ಚೆನ್ನೈನಿಂದ ಮೈಸೂರಿಗೆ ತೆರಳಬೇಕಾಗಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು. ತಪಾಸಣಾ ತಂಡ ಸ್ಥಳಕ್ಕೆ ದೌಡಾಯಿಸಿ ತಾಂತ್ರಿಕ ದೋಷವನ್ನು ನಿವಾರಿಸದರು. ತಾಂತ್ರಿಕ ದೋಷದ ಕಾರಣ ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ 42 ಜನ ಪ್ರಯಾಣಿಕರು ಸುಮಾರು ಎರಡು ಗಂಟೆಗಳ ಕಾಲ ತೊಂದರೆ ಅನುಭವಿಸಿದರು.
ಸುಮಾರು ಎರಡು ಗಂಟೆಗಳ ಬಳಿಕ ವಿಮಾನ ಮೈಸೂರಿನತ್ತ ಪ್ರಯಾಣ ಬೆಳೆಸಿತು. ಈ ಬಿಡುವಿನ ವೇಳೆ ಅಧಿಕಾರಿಗಳು ಸೇರಿದಂತೆ ಪ್ರಯಾಣಿಕರು ರಜನಿಕಾಂತ್ ಜೊತೆ ಸೆಲ್ಫಿಗೆ ಮುಗಿಬಿದ್ದರು.