ETV Bharat / bharat

ಟಿಎಸ್‌ಆರ್‌ಟಿಸಿ ಉದ್ಯೋಗಿಗಳಿಗೆ ಉದ್ಯೋಗ ಭದ್ರತೆ ಒದಗಿಸಿದ ತೆಲಂಗಾಣ ಸರ್ಕಾರ! - ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್

ನೌಕರರ ಸಮಸ್ಯೆಗಳಿಗೆ ಸ್ಪಂದಿಸಿದ ಸಿಎಂ, ಟಿಎಸ್‌ಆರ್‌ಟಿಸಿ ನೌಕರರಿಗೆ ಕರ್ತವ್ಯದ ಸಂದರ್ಭ ಯಾವುದೇ ಕಿರುಕುಳ ಆಗದಂತೆ ನೋಡಿಕೊಳ್ಳಲಾಗುವುದು, ಉದ್ಯೋಗ ಭದ್ರತೆ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ..

Telangana finalises guidelines for RTC employees' job security
ಟಿಎಸ್‌ಆರ್‌ಟಿಸಿ ಉದ್ಯೋಗಿಗಳಿಗೆ ಉದ್ಯೋಗ ಭದ್ರತೆ ಒದಗಿಸಿದ ತೆಲಂಗಾಣ ಸರ್ಕಾರ!
author img

By

Published : Feb 5, 2021, 11:54 AM IST

ಹೈದರಾಬಾದ್ (ತೆಲಂಗಾಣ): ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಎಸ್‌ಆರ್‌ಟಿಸಿ) ಉದ್ಯೋಗಿಗಳಿಗೆ ಉದ್ಯೋಗ ಭದ್ರತೆ ಒದಗಿಸಲು ತೆಲಂಗಾಣ ಸರ್ಕಾರ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ಗುರುವಾರ ತಿಳಿಸಿದೆ.

ಹಲವಾರು ಸಂದರ್ಭಗಳಲ್ಲಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಾಗ ನೌಕರರು ಅನಗತ್ಯ ಕಿರುಕುಳ ಮತ್ತು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದು ಆರ್‌ಟಿಸಿ ನೌಕರರು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಗಮನಕ್ಕೆ ತಂದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.

ಆರ್‌ಟಿಸಿ ಉದ್ಯೋಗಿಗಳಿಗೆ ಉದ್ಯೋಗ ಭದ್ರತೆ ಒದಗಿಸುವ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಈ ವಿಷಯಕ್ಕೆ ಸಂಬಂಧಿಸಿದ ಫೈಲ್‌ಗೆ ಸಹಿ ಹಾಕಿದ್ದಾರೆ.

ಈ ಸುದ್ದಿಯನ್ನೂ ಓದಿ: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಸಂಬಂಧ ಮತ್ತಿಬ್ಬರನ್ನು ಬಂಧಿಸಿದ ಎನ್​ಸಿಬಿ

ನೌಕರರ ಸಮಸ್ಯೆಗಳಿಗೆ ಸ್ಪಂದಿಸಿದ ಸಿಎಂ, ಟಿಎಸ್‌ಆರ್‌ಟಿಸಿ ನೌಕರರಿಗೆ ಕರ್ತವ್ಯದ ಸಂದರ್ಭ ಯಾವುದೇ ಕಿರುಕುಳ ಆಗದಂತೆ ನೋಡಿಕೊಳ್ಳಲಾಗುವುದು, ಉದ್ಯೋಗ ಭದ್ರತೆ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಆರ್‌ಟಿಸಿ ಅಧಿಕಾರಿಗಳ ಸಮಿತಿಯು ಸಿಎಂ ಸೂಚನೆಯಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಿದ್ದು, ಸಿಎಂ ಮಾರ್ಗಸೂಚಿಗಳನ್ನು ಒಪ್ಪಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.