ಹೈದರಾಬಾದ್: ಹೈದರಾಬಾದ್ ಸೇರಿದಂತೆ ಸುತ್ತಮುತ್ತಲಿನ ಮೂರು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಈ ಪ್ರದೇಶದಲ್ಲಿ ಯಾವುದೇ ರಿಯಾಯಿತಿ ನೀಡಬಾರೆಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ರಾಜ್ಯ ಆರೋಗ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಹೈದರಾಬಾದ್, ರಂಗಾರೆಡ್ಡಿ, ಮೆಡ್ಚೆಲ್ ಮತ್ತು ವಿಕರಾಬಾದ್ ಜಿಲ್ಲೆಗಳಲ್ಲಿ ಲಾಕ್ಡೌನ್ನನ್ನು ಇನ್ನಷ್ಟು ಬಿಗಿಗೊಳಿಸುವ ಅವಶ್ಯಕತೆ ಇದೆ ಎಂದು ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ. ಇತರ ಜಿಲ್ಲೆಗಳಲ್ಲಿ ಪ್ರಕರಣಗಳು ಕಡಿಮೆಯಾಗಿವೆ ಮತ್ತು ಕಂಟೇನ್ಮೆಂಟ್ ವಲಯಗಳ ಸಂಖ್ಯೆಯೂ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದ್ರು.
ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಕೊರೊನಾ ವೈರಸ್ ಹರಡುವಿಕೆ ಮತ್ತು ಲಾಕ್ಡೌನ್ ಅನುಷ್ಠಾನದ ಬಗ್ಗೆ ಎಂಟು ಗಂಟೆಗಳ ಕಾಲ ಪರಿಶೀಲನಾ ಸಭೆ ನಡೆಸಿದರು. ವೈದ್ಯಕೀಯ ಮತ್ತು ಆರೋಗ್ಯ ಸಚಿವ ಇ.ರಾಜೇಂದರ್, ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್, ಡಿಜಿಪಿ ಮಹೇಂದರ್ ರೆಡ್ಡಿ, ವಿಶೇಷ ಮುಖ್ಯ ಕಾರ್ಯದರ್ಶಿ ಶಾಂತಿ ಕುಮಾರಿ, ಕುಟುಂಬ ಕಲ್ಯಾಣ ಆಯುಕ್ತ ಎ.ಯೋಗಿತಾ ರಾಣಿ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸೋಮವಾರ ಕೇವಲ ಮೂರು ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಮತ್ತು 40 ರೋಗಿಗಳು ಡಿಸ್ಚಾರ್ಜ್ ಆಗಿರುವುದು ಸಂತೋಷದ ವಿಷಯವೆಂದು ಸಿಎಂ ಇದೇ ವೇಳೆ ಪ್ರತಿಕ್ರಿಯಿಸಿದ್ದಾರೆ.