ಹೈದರಾಬಾದ್: ಬಾರ್‌ಗಳು, ಕ್ಲಬ್‌ಗಳು ಮತ್ತು ಉದ್ಯಾನವನಗಳನ್ನು ಪುನಃ ತೆರೆಯಲು ತೆಲಂಗಾಣ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ.
ಕೆಲವು ಷರತ್ತುಗಳಿಗೆ ಒಳಪಟ್ಟು ಬಾರ್‌ಗಳು, ಕ್ಲಬ್‌ಗಳನ್ನು ಮತ್ತೆ ತೆರೆಯಲು ಅನುಮತಿ ನೀಡಿ ಆದೇಶ ಹೊರಡಿಸಲಾಗಿದೆ. ಮುಂದಿನ ಆದೇಶದವರೆಗೆ 'ಎ 4' ಅಂಗಡಿಗಳ ಪರವಾನಗಿ ಕೊಠಡಿಗಳು ಮುಚ್ಚಲ್ಪಡುತ್ತವೆ ಎಂದು ಹೇಳಿದೆ.
ಬಾರ್‌ಗಳು, ಕ್ಲಬ್‌ಗಳು ಮತ್ತು ಪ್ರವಾಸೋದ್ಯಮ ಬಾರ್‌ಗಳು ಕೋವಿಡ್-19 ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಸಂಗೀತ ಕಾರ್ಯಕ್ರಮಗಳು ಮತ್ತು ನೃತ್ಯ ಮಹಡಿಗಳನ್ನು ನಿಷೇಧಿಸಲಾಗುವುದು ಎಂದಿದೆ.
ಪ್ರವೇಶದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್, ಸರಿಯಾದ ಕ್ಯೂ ನಿರ್ವಹಣೆ ಮತ್ತು ಸ್ಯಾನಿಟೈಸರ್ ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ತಿಳಿಸಿದೆ. ಬಾರ್ ಸಿಬ್ಬಂದಿ ಮತ್ತು ಇತರೆ ಸಿಬ್ಬಂದಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ತಿಳಿಸಿದೆ.