ಹೈದರಾಬಾದ್: ತೆಲಂಗಾಣದ ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸ್ ನೌಕರರಿಗೆ ಮಾರ್ಚ್ ತಿಂಗಳ ಪೂರ್ಣ ವೇತನದ ಜೊತೆಗೆ, ವೈರಸ್ ವಿರುದ್ಧ ಮಹತ್ವದ ಹೋರಾಟ ನಡೆಸುತ್ತಿರುವ ವೈದ್ಯರು ಹಾಗೂ ಪೊಲೀಸ್ ಸಿಬ್ಬಂದಿಗೆ ನಗದು ಪ್ರೋತ್ಸಾಹ ನೀಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ತಡರಾತ್ರಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಗೆ ಪೂರ್ಣ ವೇತನದ ಜೊತೆಗೆ ಪ್ರೋತ್ಸಾಹ ಧನವನ್ನು ಸರ್ಕಾರ ನೀಡಲಿದೆ.
ಒಂದು ಅಥವಾ ಎರಡು ದಿನಗಳಲ್ಲಿ ಮುಖ್ಯಮಂತ್ರಿ ಪ್ರೋತ್ಸಾಹಧನವನ್ನು ಪ್ರಕಟಿಸಲಿದ್ದಾರೆ. ಈಗಾಗಲೇ ದೇಶಾದ್ಯಂತ ಲಾಕ್ಡೌನ್ನಿಂದ ಉಂಟಾದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತೆಲಂಗಾಣ ಸರ್ಕಾರದ ಎಲ್ಲ ಉದ್ಯೋಗಿಗಳಿಗೆ ಈಗಾಗಲೇ ವೇತನ ಕಡಿತವನ್ನು ಘೋಷಿಸಿದೆ.