ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ (JeM) ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಿರುವ ಜಮ್ಮು ಪೊಲೀಸರು, ಅವರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಉಗ್ರರನ್ನು ಅನಂತ್ನಾಗ್ ಜಿಲ್ಲೆಯ ಉಮರ್ ಅಹ್ಮದ್ ಮಲಿಕ್ ಮತ್ತು ಸುಹೇಲ್ ಅಹ್ಮದ್ ಮಲಿಕ್ ಎಂದು ಗುರುತಿಸಲಾಗಿದೆ. ಇವರು ಕಾಶ್ಮೀರದಿಂದ ಅಂತಾರಾಷ್ಟ್ರೀಯ ಗಡಿ ಮೂಲಕ ರಹಸ್ಯವಾಗಿ ಪ್ರಯಾಣ ಬೆಳೆಸಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಇದನ್ನೂ ಓದಿ: ಕರ್ನಾಟಕದ ಬಳಿಕ ಗುಜರಾತ್ನಲ್ಲಿ ಭೀಕರ ರಸ್ತೆ ಅಪಘಾತ... ಟ್ರಕ್ ಹರಿದು 15 ಕೂಲಿ ಆಳುಗಳು ಬಲಿ!
ಉಗ್ರರಿಂದ ಎರಡು ಎಕೆ -74 ಗನ್ಗಳು, ಒಂದು ಪಿಸ್ತೂಲು, 16 ಗ್ರೆನೇಡ್ಗಳು, ಎರಡು ಮ್ಯಾಗಜಿನ್ ಹಾಗೂ ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.