ಅಹಮದಾಬಾದ್: ಮುಂದಿನ ತಿಂಗಳಿಂದ ಆರಂಭಗೊಳ್ಳಲಿರುವ ಅಹಮದಾಬಾದ್ ರಥಯಾತ್ರೆ ವೇಳೆ ಭಯೋತ್ಪಾದಕರು ದಾಳಿ ನಡೆಸುವ ಶಂಕೆ ವ್ಯಕ್ತವಾಗಿದ್ದು, ಅದಕ್ಕಾಗಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡುವ ಸಾಧ್ಯತೆ ಇದೆ.
ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮಿಷನರ್ ಅವರು ಪ್ರಕಟಣೆ ಹೊರಡಿಸಿ ಎಚ್ಚರಿಸಿದ್ದಾರೆ. ಗುಪ್ತಚರ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಈ ಎಚ್ಚರಿಕೆ ನೀಡಲಾಗಿದ್ದು, ಎಲ್ಲ ಪ್ರದೇಶಗಳಲ್ಲಿ ಉತ್ತಮ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಸೂಚಿಸಿದ್ದಾರೆ. ಮಾಲ್, ಶಾಪಿಂಗ್ ಸೆಂಟರ್ಗಳ ಮೇಲೆ ನಿಗಾ ಇಡುವಂತೆ ಹಾಗೂ ಜನರು ಎಚ್ಚರಿಕೆಯಿಂದ ಇರುವಂತೆ ಆದೇಶ ಹೊರಡಿಸಲಾಗಿದೆ.
ಜೊತೆಗೆ 15 ದಿನಗಳ ಸಿಸಿಟಿವಿ ವಿಡಿಯೋ ದೃಶ್ಯಾವಳಿ ಡಿಲೀಟ್ ಮಾಡದಂತೆ ಕಮಿಷನರ್ ಸೂಚನೆ ನೀಡಿದ್ದಾರೆ.