ಶ್ರೀನಗರ:
ದಕ್ಷಿಣ ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇಲ್ಲಿನ ಮಿನಿ ಸಚಿವಾಲಯದ ಭದ್ರತೆಯ ಉಸ್ತುವಾರಿ ಹೊತ್ತಿದ್ದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಮೇಲೆ ಭಯೋತ್ಪಾದಕರು ಹಠಾತ್ ದಾಳಿ ನಡೆಸಿದರು. ಮಿನಿ ಸಚಿವಾಲಯದ ಮುಖ್ಯ ದ್ವಾರದಲ್ಲಿ ಕಾವಲು ಕಾಯುತ್ತಿದ್ದ ಸಿಆರ್‌ಪಿಎಫ್ ಯೋಧರ ಮೇಲೆ ಉಗ್ರರು ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿದರು. ತಕ್ಷಣ ಯೋಧರು ನಡೆಸಿದ ಪ್ರತಿದಾಳಿಗೆ ಹೆದರಿದ ಉಗ್ರರು ಅಲ್ಲಿಂದ ಕಾಲ್ಕಿತ್ತರು. ಘಟನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಭಯೋತ್ಪಾದಕರು ಇಲ್ಲೇ ಸುತ್ತಮುತ್ತಲಿನ ಪ್ರದೇಶದಲ್ಲಿ ಅಡಗಿಕೊಂಡಿರುವ ಸಾಧ್ಯತೆ ಇದೆ. ಹೀಗಾಗಿ ಇನ್ನಷ್ಟು ಸೇನಾ ಬಲದೊಂದಿಗೆ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
Jammu and Kashmir: Terrorists attack a CRPF party deployed at South Kashmir's mini secretariat. No casualties or injuries reported so far. The area has been cordoned off. More details awaited.
— ANI (@ANI) September 25, 2020 " class="align-text-top noRightClick twitterSection" data="
">Jammu and Kashmir: Terrorists attack a CRPF party deployed at South Kashmir's mini secretariat. No casualties or injuries reported so far. The area has been cordoned off. More details awaited.
— ANI (@ANI) September 25, 2020Jammu and Kashmir: Terrorists attack a CRPF party deployed at South Kashmir's mini secretariat. No casualties or injuries reported so far. The area has been cordoned off. More details awaited.
— ANI (@ANI) September 25, 2020
ಇದಕ್ಕೂ ಮುನ್ನ ಗುರುವಾರ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕ ಸಾವನ್ನಪ್ಪಿದ್ದಾನೆ.
ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರಿದ ನಂತರ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ ನಂತರ ಪುಲ್ವಾಮಾದ ಮಾಘಮಾದಲ್ಲಿ ಗುಂಡಿನ ಚಕಮಕಿ ಪ್ರಾರಂಭವಾಗಿತ್ತು.