ನವದೆಹಲಿ: ಜಮ್ಮು ಕಾಶ್ಮೀರದಲ್ಲಿ 4ಜಿ ಸೇವೆಗಳನ್ನು ಮರುಸ್ಥಾಪಿಸಲಾಗಿದೆ. ಆದ್ರೆ, ಈ ಸೇವೆಯನ್ನು ಉಗ್ರ ಸಂಘಟನೆಗಳು ವಿಧ್ವಂಸಕ ಕೃತ್ಯಗಳು ಹಾಗು ನಕಲಿ ಸುದ್ದಿಗಳನ್ನು ಪ್ರಸಾರ ಮಾಡಲು ಬಳಸುವ ಸಾಧ್ಯತೆ ಇದೆ ಎಂದು ಜಮ್ಮು ಕಾಶ್ಮೀರದ ಆಡಳಿತವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
4ಜಿ ಸೇವೆ ಸಾರ್ವಜನಿಕ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಗೆ ವಿರುದ್ಧವಾದ ಚಟುವಟಿಕೆಗಳಿಗೆ ಪ್ರೇರೇಪಣೆ ನೀಡಬಹುದು ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಕೇಂದ್ರಾಡಳಿತ ಪ್ರದೇಶವಾದ ಕಣಿವೆ ನಾಡಲ್ಲಿ ಕೋವಿಡ್ -19 ಹಿನ್ನೆಲೆ 4ಜಿ ಇಂಟರ್ನೆಟ್ ಸೇವೆಗಳನ್ನು ಮರುಸ್ಥಾಪಿಸುವಂತೆ ಕೋರಿ ಫೌಂಡೇಶನ್ ಫಾರ್ ಮೀಡಿಯಾ ಪ್ರೊಫೆಷನಲ್ಸ್ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯೆಯಾಗಿ ಈ ಪ್ರಮಾಣ ಪತ್ರವನ್ನು ಸಲ್ಲಿಸಲಾಗಿತ್ತು.
ಪಾಕಿಸ್ತಾನ ಮೂಲದ ಭಯೋತ್ಪಾದನಾ ಘಟಕಗಳು ಯುವಕರನ್ನು ಭಯೋತ್ಪಾದನೆಗೆ ಸೇರಿಸಲು ಪ್ರೇರೇಪಿಸುತ್ತವೆ. ಇದಕ್ಕಾಗಿ ಅವು ಮೆಸೇಜಿಂಗ್ ಅಪ್ಲಿಕೇಶನ್‌ಗಳನ್ನು ಬಳಸುತ್ತವೆ. 2ಜಿ ಮೊಬೈಲ್ ಡೇಟಾ ಸೇವೆಗಳು ಅಂತಹ ಅಪ್ಲಿಕೇಶನ್‌ಗಳ ಬಳಕೆಯನ್ನು ನಿರ್ಬಂಧಿಸಿದೆ ಎಂದು ತಿಳಿಸಲಾಗಿದೆ.