ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೊನಾಗೆ ಬಲಿಯಾದವರ ಸಂಖ್ಯೆ 33 ಸಾವಿರ ಗಡಿ ದಾಟಿದ್ದು, ಇತ್ತ ಚೇತರಿಕೆಯ ಪ್ರಮಾಣ ಶೇ. 64.23ಕ್ಕೆ ಹೆಚ್ಚಳವಾಗಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 47,704 ಸೋಂಕಿತರು ಪತ್ತೆಯಾಗಿದ್ದು, 654 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 14,83,157 ಹಾಗೂ ಮೃತರ ಸಂಖ್ಯೆ 33,425ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ ಶೇ. 64.23ರಷ್ಟು ಅಂದರೆ 9,52,744 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 4,96,988 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.