ನವದೆಹಲಿ: ಮನವಿ ತಿರಸ್ಕಾರ (contempt petition ) ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಚುನಾವಣೆ ಎದುರಿಸುವ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನ ಕಡ್ಡಾಯವಾಗಿ ನಮೂದು ಮಾಡಬೇಕು ಹಾಗೂ ಅದನ್ನು ಪತ್ರಿಕೆಗಳಲ್ಲಿ ಕಡ್ಡಾಯವಾಗಿ ಪ್ರಕಟಣೆ ಮಾಡಬೇಕು ಎಂಬ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.
ಆದರೆ, ಚುನಾವಣಾ ಆಯೋಗ ಸುಪ್ರೀಂಕೋರ್ಟ್ ಆದೇಶವನ್ನ ಜಾರಿ ಮಾಡಿಲ್ಲ ಎಂದು ಆರೋಪಿಸಿ ಮನವಿ ತಿರಸ್ಕಾರ ಅರ್ಜಿ ಸಲ್ಲಿಕೆ ಮಾಡಿತ್ತು. ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಪೀಠ ಈ ಸಂಬಂಧ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದ್ದು, ಒಂದು ವಾರದೊಳಗೆ ಉತ್ತರ ನೀಡುವಂತೆ ಸೂಚಿಸಿದೆ.