ಜಂಗಾಂವ್(ತೆಲಂಗಾಣ): ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಕಟ್ಟಡದ 4ನೇ ಮಹಡಿಯಿಂದ ಜಿಗಿದ ಯುವತಿಯೋರ್ವಳು ಆಟೋ ಮೇಲೆ ಬಿದ್ದಿರುವ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ತೆಲಂಗಾಣದ ಜಂಗಾಂವ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಯುವತಿ ಕಟ್ಟಡದ ಮೇಲಿಂದ ಜಿಗಿದಿದ್ದಾಳೆ. ಈ ವೇಳೆ ಆಕೆ ವಿದ್ಯುತ್ ವೈರ್ಗಳ ಮೇಲೆ ಬಿದ್ದು, ನಂತರ ಆಟೋ ಮೇಲೆ ಬಿದ್ದಿದ್ದಾಳೆ. ಹೀಗಾಗಿ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇನ್ನು ಆಟೋ ಮುಂದಿನ ಭಾಗ ಸಂಪೂರ್ಣವಾಗಿ ಹಾಳಾಗಿದೆ. ಸದ್ಯ ಆಕೆಗೆ ಜಂಗಾಂವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಓದಿ: ಕ್ರಿಕೆಟ್ ಪಂದ್ಯಾವಳಿ ವೇಳೆ ಮಾರಾಮಾರಿ: ಹಲವರಿಗೆ ಗಾಯ, 10 ಜನರ ಬಂಧನ
ಹೆಚ್ಚು ಮಾನಸಿಕ ಒತ್ತಡಕ್ಕೊಳಗಾದ ಕಾರಣ ಯುವತಿ ಈ ನಿರ್ಧಾರ ಕೈಗೊಂಡಿದ್ದಾಳೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದು, ಅದಕ್ಕಾಗಿ ಚಿಕಿತ್ಸೆ ಸಹ ಪಡೆದುಕೊಳ್ಳುತ್ತಿದ್ದಾಳೆ ಎಂದು ತಿಳಿಸಿದ್ದಾರೆ.