ನವದೆಹಲಿ: ಗಾಳಿಯಿಂದ ಸೋಂಕು ಹರಡುತ್ತದೆ ಎಂಬುದಕ್ಕೆ ಇಲ್ಲಿಯವರೆಗೂ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಸ್ಪಷ್ಟಪಡಿಸಿದೆ.
ದೇಶದಲ್ಲಿ ಕೊರೊನಾ ಹರಡುವ ಬಗ್ಗೆಯೂ ಹೆಚ್ಚಿನ ಸಂಶೋಧನೆಗಳು ನಡೆಯುತ್ತಿವೆ. ಕೊರೊನಾ ಗಾಳಿಯಿಂದ ಹರಡಬಹುದೆಂಬ ಭೀತಿಯಲ್ಲಿ ಜನರಿದ್ದಾರೆ. ಈ ವೇಳೆ ಗಾಳಿಯಿಂದ ಕೊರೊನಾ ಸೋಂಕು ಹರಡಬಹುದು ಎಂಬ ವರದಿಯನ್ನು ತಳ್ಳಿಹಾಕಿದೆ.
ಕೆಲವು ದಿನಗಳ ಹಿಂದೆ ಅಮೆರಿಕ ವಿಜ್ಞಾನಿಗಳು ಕೊರೊನಾ ಸೋಂಕು ಉಸಿರಾಡುವ ಗಾಳಿಯಲ್ಲಿ, ಮಾತನಾಡುವ ವೇಳೆ ಒಬ್ಬರಿಂದ ಒಬ್ಬರಿಗೆ ಹರಡಬಹುದೆಂದು ಹೇಳಿದ್ದರು. ಅದ್ದರಿಂದ ಅಲ್ಲಿನ ಸರ್ಕಾರ ಸಾರ್ವಜನಿಕರಿಗೆ ಮಾಸ್ಕ್ ಧರಿಸುವಂತೆ ಮನವಿ ಮಾಡಿತ್ತು. ಆದರೆ ಐಸಿಎಂಆರ್ ಇದುವರೆಗೂ ಗಾಳಿಯಿಂದ ಸೋಂಕು ಹರಡಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಇದರ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಚ್ಯೂಯಿಂಗ್, ಗುಟ್ಕಾ ಜಗಿದು ಉಗಿಯಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ ಹಾಗೂ ಚ್ಯೂಯಿಂಗ್ ಗಮ್ ಜಗಿದು ಉಗಿಯುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ ಎಂದು ಐಸಿಎಂಆರ್ ಎಚ್ಚರಿಕೆ ನೀಡಿದೆ.