ETV Bharat / bharat

EXCLUSIVE : ದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೊನಾ : ಕೇಂದ್ರ ಗೃಹ ಮಂತ್ರಿ ಅಮಿತ್​ ಶಾ ಸಂದರ್ಶನ.! - ಕೇಂದ್ರ ಗೃಹ ಮಂತ್ರಿ ಅಮಿತ್​ ಶಾ

ದೆಹಲಿಯಲ್ಲಿ ಕೊರೊನಾ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ದೆಹಲಿಯ ಕೇಜ್ರಿವಾಲ್ ಸರ್ಕಾರ ಒಟ್ಟಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.

amit shah interview
ಕೇಂದ್ರ ಗೃಹ ಮಂತ್ರಿ ಅಮಿತ್​ ಶಾ ಸಂದರ್ಶನ
author img

By

Published : Jun 28, 2020, 7:30 PM IST

Updated : Jun 28, 2020, 7:45 PM IST

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಖಾಸಗಿ ಸುದ್ದಿ ಸಂಸ್ಥೆಗೆ ವಿಶೇಷ ಸಂದರ್ಶನ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ದೆಹಲಿಯಲ್ಲಿ ಕೊರೊನಾದ ಸ್ಥಿತಿ ಇನ್ನೂ ನಿಯಂತ್ರಣದಲ್ಲಿದ್ದು, ಇನ್ನು ಸಮುದಾಯಕ್ಕೆ ಹರಡಿಲ್ಲ ಎಂದರು. ದೊಡ್ಡ ಪ್ರಮಾಣದಲ್ಲಿ ಪರೀಕ್ಷೆ ನಡೆಯುತ್ತಿದ್ದು, ಏಮ್ಸ್ ತಜ್ಞರು ಆಸ್ಪತ್ರೆಗಳಿಗೆ ಸಹಾಯ ಮಾಡುತ್ತಿದ್ದಾರೆ. ದೆಹಲಿಯ ಪ್ರತಿಯೊಬ್ಬ ವ್ಯಕ್ತಿಗೂ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

ಕೇಂದ್ರ ಗೃಹ ಮಂತ್ರಿ ಅಮಿತ್​ ಶಾ ಸಂದರ್ಶನ

ದೆಹಲಿಯಲ್ಲಿ ಕೊರೊನಾ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ದೆಹಲಿಯ ಕೇಜ್ರಿವಾಲ್ ಸರ್ಕಾರ ಒಟ್ಟಾಗಿ ಕಾರ್ಯ ನಿರ್ವಹಿಸುತ್ತಿವೆ. ಇತ್ತೀಚೆಗೆ ದೆಹಲಿಯ ರಾಧಾ ಸ್ವಾಮಿ ಸತ್ಸಂಗ್ ಬಿಯಾಸ್‌ನಲ್ಲಿ 10,000 ಕ್ಕೂ ಹೆಚ್ಚು ಫ್ಲ್ಯಾಟ್‌ಗಳನ್ನು ಹೊಂದಿರುವ ಕೋವಿಡ್ ಕೇರ್ ಸೆಂಟರ್ ಮತ್ತು ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ದೆಹಲಿಯಲ್ಲಿ ವಾಸಿಸುವ ಜನರು, ಭಯಪಡುವ ಅಗತ್ಯವಿಲ್ಲ ಎಂದರು.

ಇನ್ನು ಈವರೆಗೆ 63 ಲಕ್ಷ ಕಾರ್ಮಿಕರನ್ನು ರೈಲುಗಳ ಮೂಲಕ ಸುರಕ್ಷಿತವಾಗಿ ಅವರ ಮನೆಗಳಿಗೆ ತಲುಪಿಸಲಾಗಿದೆ ಎಂದು ಹೇಳಿದರು.

Last Updated : Jun 28, 2020, 7:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.