ಮಹಾರಾಜ್‌ಗಂಜ್ (ಉತ್ತರ ಪ್ರದೇಶ): ಭಾರತ ನೇಪಾಳ ಗಡಿ ಬಳಿ 478 ಗ್ರಾಂ ಹೆರಾಯಿನ್‌ನೊಂದಿಗೆ ಮೂವರನ್ನು ಬಂಧಿಸಲಾಗಿದೆ. ಖಚಿತ ಮಾಹಿತಿಯ ಆಧಾರದ ಮೇಲೆ, ಎಸ್‌ಎಸ್‌ಬಿ ಮತ್ತು ಸೋನೌಲಿ ಪೊಲೀಸರ ಸಹಕಾರದೊಂದಿಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರಿಂದ 478 ಗ್ರಾಂ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಬೆಲೆ 4 ಕೋಟಿ ರೂಪಾಯಿ. ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲಾಗಿದ್ದು, ಹೆರಾಯಿನ್ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದಕ್ಕೂ ಮೊದಲು, ಸೆಪ್ಟೆಂಬರ್ 18 ರಂದು ಕೇಂದ್ರ ಅಪರಾಧ ವಿಭಾಗವು ಇಬ್ಬರು ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿತ್ತು. ಬಂಧಿತರಿಂದ ವಿವಿಧ ಬಗೆಯ ಡ್ರಗ್ಸ್ಗಳನ್ನು ವಶಪಡಿಸಿಕೊಂಡಿದೆ.
ಅದೇ ದಿನ, ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮೂರು ಪ್ರತ್ಯೇಕ ಡ್ರಗ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಐದು ಜನರನ್ನು ವಶಕ್ಕೆ ತೆಗೆದುಕೊಂಡಿದೆ.