ಕಾನ್ಪುರ (ಉತ್ತರ ಪ್ರದೇಶ): ಸರ್ಕಾರಿ ಸಾರಿಗೆ ಬಸ್ ಮಾರುತಿ ವ್ಯಾನ್ಗೆ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ ಬಳಿಯ ಧಮ್ನಿ ನಿವಾಡ ಬಳಿ ಭಾನುವಾರ ನಡೆದಿದೆ.
ಶಿವರಾಜ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಾರುತಿ ವ್ಯಾನ್ನಲ್ಲಿ ಐದು ಮಂದಿ ಪ್ರಯಾಣಿಸುತ್ತಿದ್ದರು. ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಮಾರುತಿ ವ್ಯಾನ್ ಚಾಲನೆ ಮಾಡುತ್ತಿದ್ದ ರಿಂಕು(21), ಮಾಯಾ ದೇವಿ (35) ಮತ್ತು ರಾಮ್ಕಲಿ (42) ಎಂದು ಮೃತರನ್ನು ಗುರುತಿಸಲಾಗಿದೆ. ಪುರನ್ಲಾಲ್ ಮತ್ತು ರಾಮ್ ಪ್ರಕಾಶ್ ಅವರಿಗೆ ಗಾಯಗಳಾಗಿದ್ದು, ಅವರನ್ನು ಕಾನ್ಪುರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಕನೌಜ್ ಜಿಲ್ಲೆಗೆ ಸೇರಿದವರಾಗಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಶಿವರಾಜ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.